ನನಗೆ ಸದ್ಯ ಮುಸ್ಲಿಂ ಮತಗಳು ಬೇಡ: 15 ವರ್ಷದ ನಂತ್ರ ಬೇಕು ಎಂದು ಅಸ್ಸಾಂ ಸಿಎಂ ಹೇಳಿದ್ಯಾಕೆ?

Public TV
2 Min Read

ನವದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರು ನನಗೆ ಸದ್ಯ ಮುಸ್ಲಿಂ ಮತಗಳು (Muslim Vote) ಬೇಡ, ವೋಟ್ ಬ್ಯಾಂಕ್ (Vote Bank) ರಾಜಕಾರಣದಿಂದ (Politics) ಸಮಸ್ಯೆಗಳು ಉಂಟಾಗುತ್ತವೆ ಎಂದು ಹೇಳಿದ್ದಾರೆ.

ಮಾಧ್ಯಮ ಸಂದರ್ಶನವೊಂದರಲ್ಲಿ ಈ ರೀತಿಯಾದ ಹೇಳಿಕೆಯನ್ನು ನೀಡಿದ ಅವರು, ನಾನು ವೋಟ್ ಬ್ಯಾಂಕ್ ರಾಜಕೀಯದಲ್ಲಿ ತೊಡಗುವುದಿಲ್ಲ. ಅಲ್ಲದೇ ಕಾಂಗ್ರೆಸ್ (Congress) ಪಕ್ಷದಂತೆ ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದ ವಿಷಯಗಳೊಂದಿಗೆ ರಾಜಕೀಯವನ್ನು ಜೋಡಿಸುವುದಿಲ್ಲ. ನಾನು ತಿಂಗಳಿಗೊಮ್ಮೆ ಮುಸ್ಲಿಂ ಪ್ರದೇಶಕ್ಕೆ ಭೇಟಿ ನೀಡುತ್ತೇನೆ. ಅವರ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಜನರನ್ನು ಭೇಟಿ ಮಾಡುತ್ತೇನೆ. ಆದರೆ ನಾನು ರಾಜಕೀಯವನ್ನು ಅಭಿವೃದ್ಧಿಯೊಂದಿಗೆ ಸೇರಿಸುವುದಿಲ್ಲ. ಕಾಂಗ್ರೆಸ್ ಕೇವಲ ಮತಗಳಿಗಾಗಿ ಮುಸ್ಲಿಮರ ಓಲೈಕೆ ಮಾಡುತ್ತಿದೆ ಹೊರತು ಅವರ ಶ್ರೇಯೋಭಿವೃದ್ಧಿ ಬಗ್ಗೆ ಗಮನ ಹರಿಸಿಲ್ಲ. ಆದ್ದರಿಂದ ಮುಸ್ಲಿಮರು ಕಾಂಗ್ರೆಸ್‌ನೊಂದಿಗಿನ ತಮ್ಮ ಸಂಬಂಧದ ಬಗ್ಗೆ ಅರಿತುಕೊಳ್ಳಬೇಕು ಎಂದರು. ಇದನ್ನೂ ಓದಿ: ಪಾಕ್, ಚೀನಾಕ್ಕೆ ಠಕ್ಕರ್ – ಶ್ರೀನಗರದಲ್ಲಿ ಮೇಲ್ದರ್ಜೆಗೆರಿಸಿದ MiG- 29 ಯುದ್ಧ ವಿಮಾನ ನಿಯೋಜನೆ

ನನಗೆ ಮತ ನೀಡಬೇಡಿ. ನಿಮ್ಮ ಪ್ರದೇಶಗಳನ್ನು ಮುಂದಿನ 10 ವರ್ಷಗಳಲ್ಲಿ ಅಭಿವೃದ್ಧಿಪಡಿಸುತ್ತೇನೆ. ಬಾಲ್ಯವಿವಾಹ ಪದ್ಧತಿ ಕೊನೆಗೊಳ್ಳಬೇಕು. ಮದರಸಾಗಳಿಗೆ ಹೋಗುವುದನ್ನು ನಿಲ್ಲಿಸಿ ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗಬೇಕು. ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ನಾನು 7 ಕಾಲೇಜುಗಳನ್ನು ಉದ್ಘಾಟಿಸಲಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಭಾರತದಲ್ಲಿ ಏಕೆ ಮುಸ್ಲಿಮರನ್ನ ಕಂಡ್ರೆ ಇಷ್ಟೊಂದು ದ್ವೇಷ, ನಮ್ಮ ಮನದ ಮಾತನ್ನೂ ಕೇಳಿ – ಮೋದಿಗೆ ಮೌಲ್ವಿ ಮನವಿ

ಕಾಂಗ್ರೆಸ್ ಮುಸ್ಲಿಂ ಪ್ರದೇಶಗಳಲ್ಲಿ ಮೂಲಸೌಕರ್ಯ ಮತ್ತು ಶಾಲೆಗಳನ್ನು ನಿರ್ಮಿಸಲಿಲ್ಲ. ಆದರೆ ನಾನು ಅದನ್ನು ಅಭಿವೃದ್ಧಿಪಡಿಸಲು ಬಯಸುತ್ತೇನೆ. ಮುಂದಿನ 10ರಿಂದ 15 ವರ್ಷಗಳವರೆಗೆ ಇದನ್ನು ಅಭಿವೃದ್ಧಿಪಡಿಸಿದ ಬಳಿಕ ಮುಸ್ಲಿಮರ ಹತ್ತಿರ ಮತ ಕೇಳುತ್ತೇನೆ. ಈಗ ಅವರ ಬಳಿ ಮತ ಕೇಳಿದರೆ ಅದು ಕೊಡುವ ಮತ್ತು ಕೊಂಡುಕೊಳ್ಳುವ ಸಂಬಂಧವಾಗಲಿದೆ. ಅದು ವಹಿವಾಟಿನ ಸಂಬಂಧವಾಗುವುದು ನನಗೆ ಇಷ್ಟವಿಲ್ಲ ಎಂದರು. ಇದನ್ನೂ ಓದಿ: ಮಣಿಪುರ ಹೊತ್ತಿ ಉರಿಯುತ್ತಿದ್ದರೆ ಪ್ರಧಾನಿ ನಗುತ್ತ ಜೋಕ್ ಮಾಡಿಕೊಂಡಿದ್ದಾರೆ – ರಾಹುಲ್ ಕಿಡಿ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್