ಬೆಂಗಳೂರು | ಮಹಿಳೆ ನೇಣಿಗೆ ಶರಣು – ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

1 Min Read

ಬೆಂಗಳೂರು: ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ಬೆಂಗಳೂರು (Bengaluru) ಹೊರವಲಯದ ತಲಘಟ್ಟಪುರದ ಅವಲಹಳ್ಳಿಯಲ್ಲಿ ನಡೆದಿದೆ

- Advertisement -

ಮೃತಳನ್ನು ನವ್ಯ (28) ಎಂದು ಗುರುತಿಸಲಾಗಿದೆ. ನಾಲ್ಕು ವರ್ಷದ ಹಿಂದೆ ನವ್ಯ, ನಗರದ ಸಾಫ್ಟ್‌ವೇರ್ ಇಂಜಿನಿಯರ್ ಶೈಲೇಶ್‌ನನ್ನು ಮದುವೆಯಾಗಿದ್ದಳು. ಇತ್ತೀಚೆಗೆ ಪತಿ ಶೈಲೇಶ್ ಮತ್ತವರ ಮನೆಯವರು ವರದಕ್ಷಿಣೆ ತರುವಂತೆ ಮಹಿಳೆಗೆ ಕಿರುಕುಳ ನೀಡಿದ್ದರು ಎಂಬ ಆರೋಪ ಕೇಳಿ ಬಂದಿದೆ.

- Advertisement -

- Advertisement -

ವರದಕ್ಷಿಣೆ ಕಿರುಕುಳದಿಂದ ನೊಂದ ಮಹಿಳೆ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಪತಿ ಶೈಲೇಶ್ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದ. ಆದರೆ ಚಿಕಿತ್ಸೆ ಫಲಕಾರಿಯಾದೇ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಉಕ್ರೇನ್‌ನ ರೈಲು ನಿಲ್ದಾಣದ ಮೇಲೆ ರಷ್ಯಾ ಡ್ರೋನ್ ದಾಳಿ, 30 ಮಂದಿ ಸಾವು – ಭಯೋತ್ಪಾದನಾ ಕೃತ್ಯ ಎಂದ ಝೆಲೆನ್ಸ್ಕಿ

- Advertisement -

ನವ್ಯ ಕುಟುಂಬಸ್ಥರು ಇದು ಕೊಲೆ ಎಂದು ಆರೋಪಿಸಿ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿ ಹತ್ಯೆ – ಇಬ್ಬರು ಶಂಕಿತರು ವಶಕ್ಕೆ

Share This Article