ಉತ್ತರ ಕರ್ನಾಟಕ ಭಾಗದ ಜನರು ಮುಗ್ದರು : ಡಾ.ಚಂದ್ರಶೇಖರ ಕಂಬಾರ

Public TV
2 Min Read

– ಯಶಸ್ವಿಯಾದ ಉ.ಕರ್ನಾಟಕ ಸಂಸ್ಕøತಿಯ ಬನ್ನಿ ಬಂಗಾರ ಕಾರ್ಯಕ್ರಮ

ಬೆಂಗಳೂರು: ಉತ್ತರ ಕರ್ನಾಟಕ ಸಂಸ್ಕøತಿ ಪ್ರತೀಕವಾಗಿರುವ ಬನ್ನಿ ಬಂಗಾರ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಶನಿವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಉತ್ತರ ಕರ್ನಾಟಕ ನಾಗರೀಕರ ಅಭಿವೃದ್ದಿ ಸಂಘದ ವತಿಯಿಂದ ಏರ್ಪಡಿಸಿದ್ದ ಬನ್ನಿ ಬಂಗಾರ ಮತ್ತು ಉತ್ತರ ಕರ್ನಾಟಕ ಸಾಂಸ್ಕøತಿಕ ಉತ್ಸವ ಕಾರ್ಯಕ್ರಮವನ್ನು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಅವರು, ನಾಡ ದೇವತೆಗೆ ಬನ್ನಿ ಅರ್ಪಿಸಿ ಕಾರ್ಯಕ್ರಮ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಸಾಹಿತಿ ಸಂಗಮೇಶ್ ಬಾದವಾಡಗಿ ಅವರು ಬರೆದಿರುವ ರೊಟ್ಟಿ ಪಂಚಮಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಬನ್ನಿ ಬಂಗಾರ ನಮ್ಮ ಉತ್ತರ ಕರ್ನಾಟಕ ಭಾಗದ ಸಂಸ್ಕøತಿಯ ಹಬ್ಬ. ಉತ್ತರ ಕರ್ನಾಟಕ ಭಾಗದ ಜನರು ಮುಗ್ದರು, ಅವರಿಗೆ ಚಾಲಾಕಿತನ ಗೊತ್ತಿಲ್ಲ. ಅಲ್ಲಿನ ಸಂಸ್ಕøತಿ ಸಾಕಷ್ಟು ಸಮೃದ್ಧವಾಗಿದೆ. ಅಲ್ಲಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರುವ ಎಲ್ಲರೂ ಒಟ್ಟಾಗಿ ಹಬ್ಬ ಆಚರಣೆ ಮಾಡುತ್ತಿರುವುದು ಸಂತಸದ ವಿಷಯ ಎಂದು ಹೇಳಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ ನಗರದಲ್ಲಿ ಅಂರ್ತಜಲ ಮಟ್ಟ ಭಾರೀ ಏರಿಕೆ – ಕಟ್ಟಡಗಳಿಗೆ ಕಾದಿದೆಯಾ ಅಪಾಯ?

ಉತ್ತರ ಕರ್ನಾಟಕ ನಾಗರಿಕರ ಅಭಿವೃದ್ಧಿ ಸಂಘದ ಮಾಜಿ ಅಧ್ಯಕ್ಷ ಬಸವರಾಜ್ ದಿಂಡೂರು ಮಾತನಾಡಿ, ಬೆಂಗಳೂರಿಗೆ ಬಂದು ನೆಲೆಸಿರುವ ಉತ್ತರ ಕರ್ನಾಟಕ ಭಾಗದ ಜನರು ಮೂವತ್ತು ವರ್ಷಗಳಿಂದ ಸಂಘಟನೆ ಮಾಡಿಕೊಂಡು ರೊಟ್ಟಿ ಪಂಚಮಿ, ಬನ್ನಿ ಬಂಗಾರ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರಲಾಗುತ್ತಿದೆ. ಉತ್ತರ ಕರ್ನಾಟಕ ಭಾಗದ ಜನರಿಗಾಗಿ ಒಂದು ಭವನ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದ್ದು, ಮುಂಬರುವ ಜ.14ಕ್ಕೆ ಶಂಕು ಸ್ಥಾಪನೆ ಕಾರ್ಯ ನೆರವೇರಿಸಲು ಯೋಜಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಿಎಕ್ಸ್ ಮ್ಯಾಕ್ಸ್ ನಿರ್ದೇಶಕ ದಯಾನಂದ ಪಟ್ಟಣ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಉತ್ತರ ಕರ್ನಾಟಕ ನಾಗರಿಕರ ಸಂಘದ ಅಧ್ಯಕ್ಷ ಮುರುಗೇಶ್ ಜವಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ನ್ಯಾಯಮೂರ್ತಿ ವಿ.ಎಸ್.ಸಾಂಬ್ರಾಣಿ, ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ, ಸಾಹಿತಿ ಸಂಗಮೇಶ್ ಬಾದವಾಡಗಿ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಉತ್ತರ ಕರ್ನಾಟಕ ನಾಗರಿಕರ ಸಂಘದ ಗೌರವ ಕಾರ್ಯದರ್ಶಿ ಶಂಕರ್ ಪಾಟೀಲ್ ಸ್ವಾಗತಿಸಿದರು. ಸಂಘದ ನಿರ್ದೇಶಕರಾದ ದಯಾನಂದ ಪಾಟೀಲ್ ವಂದನಾರ್ಪಣೆ ಮಾಡಿದರು. ಪತ್ರಕರ್ತ ಹಾಗೂ ಸಂಘದ ನಿರ್ದೇಶಕ ಶಂಕರ್ ಪಾಗೋಜಿ ಕಾರ್ಯಕ್ರಮ ನಿರೂಪಿಸಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಸಿದ್ದರಾಮಯ್ಯ ಒಬ್ಬರೇ ನಾಯಕ: ಅನ್ಸಾರಿ

ಈ ಸಂದರ್ಭದಲ್ಲಿ ಹಿಂದೂಸ್ತಾನಿ ಸಂಗೀತ ಗಾಯಕಿ ಸಂಗೀತಾ ಕಟ್ಟಿ ಅವರ ಗಾಯನ ಕಾರ್ಯಕ್ರಮ ನಡೆಯಿತು. ಕೊಪ್ಪಳದ ವಿದೂಶಿ ರೇಖಾ ಜಗದೀಶ್ ನೇತೃತ್ವದ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ವತಿಯಿಂದ ದಸರಾ ವೈಭವ ನೃತ್ಯ ರೂಪಕ ಕಾರ್ಯಕ್ರಮ ನಡೆಯಿತು.

Share This Article
Leave a Comment

Leave a Reply

Your email address will not be published. Required fields are marked *