ದರ್ಶನ್ ಅರೆಸ್ಟ್ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ರಿಯಾಕ್ಷನ್

Public TV
1 Min Read

ಸ್ಯಾಂಡಲ್ವುಡ್ ನಟ ದರ್ಶನ್ (Actor Darshan) ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ವಿಚಾರವಾಗಿ ಮೈಸೂರಿನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಕೇಸ್‌ಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ (G.Parameshwara) ಮಾಧ್ಯಮಕ್ಕೆ ರಿಯಾಕ್ಟ್‌ ಮಾಡಿದ್ದಾರೆ. ಇದನ್ನೂ ಓದಿ:ಏನಿದು ಹತ್ಯೆ ಪ್ರಕರಣ? ದರ್ಶನ್‌ ಅರೆಸ್ಟ್‌ ಆಗಿದ್ದು ಯಾಕೆ? ಇಲ್ಲಿದೆ ಪೂರ್ಣ ವಿವರ

ರೇಣುಕಾಸ್ವಾಮಿ ಕೊಲೆ ಕೇಸ್ ದರ್ಶನ್‌ರನ್ನು ಬಂಧಿಸಲಾಗಿದೆ. ಬಂಧಿಸಿರುವ ಆರೋಪಿಗಳ ವಿಚಾರಣೆ ಮಾಡುವಾಗ ದರ್ಶನ್ ಹೆಸರು ಬಂದಿದೆ ಎಂಬ ಮಾಹಿತಿ ಇದೆ. ಇದರ ಮೇಲೆ ಇನ್ನಷ್ಟು ತನಿಖೆ ನಡೆಯಬೇಕಿದೆ. ಅಲ್ಲಿಯವರೆಗೂ ಇದರ ಏನು ಹೇಳೋಕೆ ಆಗಲ್ಲ ಎಂದು ಪರಮೇಶ್ವರ್ ಅವರು ಮಾತನಾಡಿದ್ದಾರೆ.

ಈ ಕೇಸ್‌ನಲ್ಲಿ ಅವರಯ ನೇರವಾಗಿ ಭಾಗಿಯಾಗಿದ್ದಾರಾ ಇಲ್ವಾ? ಯಾವ ಕಾರಣ ಕೊಲೆ ನಡೆದಿದೆ ಎಂದು ಇನ್ನೂ ತನಿಖೆ ಬಳಿಕ ತಿಳಿಯಬೇಕಿದೆ. ಈ ಸಂದರ್ಭದಲ್ಲಿ ಹೆಚ್ಚೇನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ಸೋಶಿಯಲ್ ಮೀಡಿಯಾ ಕಾಮೆಂಟ್ ಬಗ್ಗೆ ಗೊತ್ತಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಮಾತನಾಡಿದ್ದಾರೆ.

ಅಂದಹಾಗೆ, ಚಿತ್ರದುರ್ಗದ ರೇಣುಕಾಸ್ವಾಮಿ ಅವರು ಪವಿತ್ರಾ ಗೌಡ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಮಾಡಿದ ನಂತರ ರೇಣುಕಾಸ್ವಾಮಿರನ್ನು ಜೂನ್ 9ರಂದು ಹತ್ಯೆ ಮಾಡಲಾಗಿತ್ತು. ಕೊಲೆ ಮಾಡಿದ ಇಬ್ಬರು ಅರೋಪಿಗಳ ಜೊತೆ ದರ್ಶನ್ ನಿರಂತರ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿ ಬಂದಿದೆ. ಪೊಲೀಸ್ ವಿಚಾರಣೆಯ ಸಂದರ್ಭದಲ್ಲಿ ಕೊಲೆ ಆರೋಪಿಗಳು ದರ್ಶನ್ ಸೂಚನೆಯಂತೆ ಕೊಲೆ ಮಾಡಿದ್ದೇವೆ. ಕೊಲೆಗೆ ದರ್ಶನ್ ಸುಪಾರಿ ನೀಡಿದ್ದರು ಎಂದು ಆರೋಪಿಗಳು ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ.

Share This Article