ಹುಬ್ಬಳ್ಳಿ: ಕೆಪಿಸಿಸಿ ವೈದ್ಯಕೀಯ ಘಟಕದ ರಾಜ್ಯಾಧ್ಯಕ್ಷರಾಗಿದ್ದ ಡಾ. ಮಹೇಶ್ ನಾಲವಾಡ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಬೆಳವಣಿಗಳಿಂದ ಬೇಸತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ಮಹೇಶ್ ನಾಲವಾಡ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ. ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಸಲ್ಲಿಸಿದ್ದಾರೆ. ಆದರೆ ನಾಲವಾಡ್ ಅವರನ್ನು ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿತ್ತು. ಈ ಬೆನ್ನಲ್ಲೇ ಮಹೇಶ್ ನಾಲವಾಡ ಅವರು ಕಾಂಗ್ರೆಸ್ ನಾಯಕರಿಗೆ ಬಿಗ್ ಶಾಕ್ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಹುಬ್ಬಳ್ಳಿಯ ಪ್ರಭಾವಿ ಕಾಂಗ್ರೆಸ್ ಮುಖಂಡರಾಗಿದ್ದ ಡಾ. ಮಹೇಶ್ ನಾಲವಾಡ ಅವರು, 2018ರ ವಿಧಾನಸಭಾ ಚುನಾವಣೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಬಿಜೆಪಿಯ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ಮಹೇಶ್ ನಾಲವಾಡ್ ಸೋತಿದ್ದರು.