ಅಣ್ಣಾವ್ರ 94ನೇ ಜನ್ಮದಿನ: ಸ್ಮಾರಕಕ್ಕೆ ಹರಿದುಬಂದ ಅಭಿಮಾನಿ ಸಾಗರ

Public TV
1 Min Read

ರನಟ ಡಾ.ರಾಜ್ ಕುಮಾರ್ (Dr. Rajkumar) ಅವರ 94ನೇ ಜನ್ಮದಿನವನ್ನು (Birthday) ನಾಡಿನಾದ್ಯಂತ ಅಭಿಮಾನಿಗಳು (Fans) ವಿಭಿನ್ನ ರೀತಿಯಲ್ಲಿ ಆಚರಿಸುತ್ತಿದ್ದಾರೆ. ನೆಚ್ಚಿನ ನಟನ ಹೆಸರಿನಲ್ಲಿ ರಕ್ತದಾನ, ಅನ್ನದಾನ ಹಾಗೂ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಸಹಾಯ ಮಾಡುವ ಮೂಲಕ ಆಚರಿಸುತ್ತಿದ್ದಾರೆ. ನಿನ್ನೆಯಷ್ಟೇ ಅಣ್ಣಾವ್ರ ಮೊಮ್ಮಗನ ಹುಟ್ಟುಹಬ್ಬವನ್ನು ಆಚರಿಸಿದ್ದ ಅಭಿಮಾನಿಗಳು ಇಂದು ಮೇರುನಟನಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.

ಕೆಲ ಅಭಿಮಾನಿಗಳು ಇದ್ದೂರಿನಲ್ಲೇ ಹುಟ್ಟು ಹಬ್ಬ ಆಚರಿಸುತ್ತಿದ್ದರೆ, ಇನ್ನೂ ಹಲವರು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ (Kantheerava Studio) ಡಾ.ರಾಜ್ ಕುಮಾರ್ ಸ್ಮಾರಕಕ್ಕೆ ಬಂದು ಪೂಜೆ ಸಲ್ಲಿಸುತ್ತಿದ್ದಾರೆ. ಬೆಳಗ್ಗೆಯಿಂದಲೇ ಸ್ಮಾರಕಕ್ಕೆ ಅಭಿಮಾನಿಗಳು ದಂಡು ಹರಿದು ಬಂದಿದೆ. ಸ್ಮಾರಕದ ಮುಂದೆಯೇ ಅನ್ನಸಂತರ್ಪಣೆ, ಕೇಕ್ ಕತ್ತರಿಸುವುದು ಹಾಗೂ ರಕ್ತದಾನ, ನೇತ್ರದಾನ ಶಿಬಿರಗಳನ್ನು ಆಯೋಜನೆ ಮಾಡಲಾಗಿದೆ. ಇದನ್ನೂ ಓದಿ:ಹನಿಮೂನ್‌ಗೆ ವಿದೇಶಕ್ಕೆ ಹಾರಿದ ಸಿಂಹಪ್ರಿಯಾ ಜೋಡಿ

ಡಾ.ರಾಜ್ ಕುಟುಂಬದ ಸದಸ್ಯರು ಕೂಡ ಆಗಮಿಸಿ ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ. ಪಕ್ಕದಲ್ಲೇ ಇರುವ ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಸಮಾಧಿಗಳಿಗೂ ಪೂಜೆ ಸಲ್ಲಿಸಲಿದ್ದಾರೆ. ಅಣ್ಣಾವ್ರ ಅಭಿಮಾನಿಗಳ ಜೊತೆ ಕುಟುಂಬದ ಸದಸ್ಯರು ಕೆಲವೊತ್ತು ಇರಲಿದ್ದಾರೆ.

Share This Article