ಶಿರಸಿ ಮೂಲದ ಯುವತಿ ಡಾ.ಶೃತಿ ಹೆಗಡೆಗೆ ವಿಶ್ವ ಸುಂದರಿ-2024 ಕಿರೀಟ!

Public TV
1 Min Read

ಕಾರವಾರ: ಉತ್ತರ ಕನ್ನಡ (UttaraKannada) ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಯುವತಿಯೊಬ್ಬಳು ಇತ್ತೀಚಿಗೆ ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.

ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾದ ಹುಬ್ಬಳ್ಳಿಯಲ್ಲಿ ನೆಲೆಸಿದ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶೃತಿ ಹೆಗಡೆ (Shruti Hegde) ಅಮೆರಿಕದಲ್ಲಿ ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದಾರೆ. ಈಕೆ ಈ ಮೊದಲು 2018 ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ (Miss South India) ವಿಜೇತೆಯಾಗಿದ್ದರು. 2023 ರಲ್ಲಿ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದ ಈಕೆ, ಈಗ ಅಮೆರಿಕದಲ್ಲಿ ನಡೆದ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಇದನ್ನೂ ಓದಿ: 2,000 ರೂ. ಮುಖಬೆಲೆಯ 7,581 ಕೋಟಿ ಮೌಲ್ಯದ ನೋಟುಗಳು ಜನರ ಬಳಿಯಿದೆ: RBI

ಅಮೆರಿಕದ (USA) ಫ್ಲೋರಿಡಾದಲ್ಲಿ ಕಳೆದ ಜೂ.6 ರಿಂದ 10ರ ವರೆಗೆ ಆಯೋಜಿತವಾಗಿದ್ದ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ಒಟ್ಟು 40 ದೇಶಗಳ ಸುಂದರಿಯವರು ಪೈಪೋಟಿಯಲ್ಲಿದ್ದರು. ರಾಷ್ಟ್ರೀಯ ಉಡುಗೆ, ಈಜು ಉಡುಗೆ, ಪ್ರಶ್ನೋತ್ತರ, ವಯಕ್ತಿಕ ಸಂದರ್ಶನ ಸೇರಿ ಹಲವು ಸುತ್ತುಗಳಲ್ಲಿ ಸ್ಪರ್ಧೆ ಸಾಗಿತ್ತು. ಎಲ್ಲದರಲ್ಲೂ ಉತ್ತಮ ಪ್ರದರ್ಶನ ನೀಡಿದ ಶೃತಿ ಹೆಗಡೆ ಗೆಲುವು ಸಾಧಿಸಿದ್ದಾರೆ.‌ ಇದನ್ನೂ ಓದಿ: ಮೋದಿಗೆ ತಲೆಬಾಗಿ ನಮಿಸಿದ್ದು ಸರಿಯಲ್ಲ- ಸ್ಪೀಕರ್‌ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಹುಬ್ಬಳ್ಳಿಯಲ್ಲಿಯೇ ಎಂಬಿಬಿಎಸ್ ಪೂರೈಸಿರುವ ಡಾ.ಶೃತಿ ಹೆಗಡೆ, ಚರ್ಮ ರೋಗ ತಜ್ಞೆಯಾಗುವ ಹಂಬಲದಿಂದ‌ ತುಮಕೂರಿನಲ್ಲಿ ಎಮ್.ಡಿ. ಅಧ್ಯಯನ ನಡೆಸುತ್ತಿದ್ದಾರೆ. ಈಕೆ ಭರತನಾಟ್ಯ ಕಲಾವಿದೆಯೂ ಆಗಿದ್ದು, ದುಬೈ, ಮಾಲ್ಡೀವ್ಸ್‌, ಭೂತಾನ್ ಮುಂತಾದ ದೇಶಗಳಲ್ಲಿ ಪ್ರದರ್ಶನ ನೀಡಿದ್ದಾಳೆ. ಕೆಲವು ಧಾರವಾಹಿ, ಕನ್ನಡ ಚಲನಚಿತ್ರ, ವೆಬ್ ಸಿರೀಸ್ ನಲ್ಲಿ ನಟಿಸಿದ್ದಾಳೆ. ಇದನ್ನೂ ಓದಿ: ಆಫ್ರಿಕಾ ವಿರುದ್ಧ 10 ವಿಕೆಟ್‌ಗಳ ಜಯ – ಭಾರತದ ವನಿತೆಯರಿಗೆ ಮತ್ತೊಂದು ಕಿರೀಟ! 

Share This Article