ಶಿರಸಿ ಮಾರಿಕಾಂಬಾ ದರ್ಶನಕ್ಕೆ ವಸ್ತ್ರಸಂಹಿತೆ ಜಾರಿ

Public TV
1 Min Read

– ಭಾರತೀಯ ಸಂಸ್ಕೃತಿಯ ಉಡುಗೆ ಧರಿಸಿ ಬರುವಂತೆ ಸೂಚನೆ

ಕಾರವಾರ: ದಕ್ಷಿಣ ಭಾರತದ ಶಕ್ತಿ ಪೀಠಗಳಲ್ಲಿ ಒಂದಾದ ಉತ್ತರ ಕನ್ನಡ (Uttar Kannada) ಜಿಲ್ಲೆಯ ಶಿರಸಿಯ (Sirsi) ಮಾರಿಕಾಂಬ ದೇವಸ್ಥಾನದಲ್ಲಿ ಆಡಳಿತ ಕಮಿಟಿ ವಸ್ತ್ರಸಂಹಿತೆಯನ್ನು ಜಾರಿ ಮಾಡಿದೆ.

ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಉಡುಗೆಗಳನ್ನು ಧರಿಸಿ ಬರುವಂತೆ ಸೂಚನೆ ನೀಡಲಾಗಿದ್ದು, ಈ ಸಂಬಂಧ ದೇವಸ್ಥಾನದ ಮುಖ್ಯ ದ್ವಾರದಲ್ಲಿ ಫಲಕ ಅಳವಡಿಸಲಾಗಿದೆ. ಈ ಹಿಂದೆ ಗೋಕರ್ಣ, ಮಹಾಬಲೇಶ್ವರ ದೇವಸ್ಥಾನದಲ್ಲಿ ಸಹ ವಸ್ತ್ರಸಂಹಿತೆ ಜಾರಿ ಮಾಡಲಾಗಿದ್ದು, ಇದೀಗ ಮಾರಿಕಾಂಬಾ ದೇವಸ್ಥಾನದಲ್ಲಿ ಸಹ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ.ಇದನ್ನೂ ಓದಿ: ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್, ಗೂಡ್ಸ್ ರೈಲಿಗೆ ಡಿಕ್ಕಿ – ಹೊತ್ತಿ ಉರಿದ ಬೋಗಿಗಳು

ದೇಗುಲಗಳಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು ದೇವರ ದರ್ಶನ ಪಡೆಯಬೇಕೆಂದು ಮುಜರಾಯಿ ಇಲಾಖೆ ಆದೇಶ ಮಾಡಿತ್ತು. ಇದರ ಬೆನ್ನಲ್ಲೇ ರಾಜ್ಯದ ವಿವಿಧ ದೇಗುಲಗಳ ಜೊತೆ ಶಿರಸಿಯಲ್ಲಿಯೂ ವಸ್ತ್ರಸಂಹಿತೆ ಕಡ್ಡಾಯ ಮಾಡಲಾಗಿದೆ. ನವರಾತ್ರಿಯ ಸಂದರ್ಭದಲ್ಲಿ ಭಕ್ತರು ಹೆಚ್ಚು ಬರುತಿದ್ದು, ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಪ್ರವೇಶ ದ್ವಾರದ ಬಳಿ ಬೋರ್ಡ್ ಅಳವಡಿಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಭಾರತೀಯ ಸಂಸ್ಕೃತಿಯ ಉಡುಗೆ ತೊಡುಗೆಗಳನ್ನು ಕಡ್ಡಾಯ ಮಾಡುವ ಉದ್ದೇಶವಿದೆ.

ಇದಕ್ಕೆ ಸಂಬಂಧಿಸಿದಂತೆ ಶಿರಸಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಆರ್.ಜಿ.ನಾಯ್ಕ್ ಮಾತನಾಡಿದ್ದು, ದೇವಸ್ಥಾನಕ್ಕೆ ಹೋಗುವಾಗ ಸಂಪ್ರದಾಯ ಪಾಲನೆ ಮಾಡಬೇಕೆಂಬ ಉದ್ದೇಶದಿಂದ ಈ ಆದೇಶ ಮಾಡಲಾಗಿದೆ. ಭಕ್ತರ ಸ್ಪಂದನೆ ಕೂಡಾ ಪರಿಗಣಿಸಿ ಮುಂದಿನ ಹೆಜ್ಜೆ ಇಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ಎಡಿಜಿಪಿ ಚಂದ್ರಶೇಖರ್‌ ದೂರು – ಎನ್‌ಸಿಆರ್‌ ದಾಖಲು

Share This Article