ತೀವ್ರ ಬರ – ಯಾದಗಿರಿ ಜಿಲ್ಲೆಯ 65 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

Public TV
2 Min Read

– 36 ಗ್ರಾಮಗಳಿಗೆ ಖಾಸಗಿ ಬೋರ್ವೆಲ್‌ಗಳಿಂದ ನೀರು ಪೂರೈಕೆ
– ಜಿಲ್ಲಾಧಿಕಾರಿ ಡಾ. ಸುಶೀಲಾ.ಬಿ ಮಾಹಿತಿ

ಯಾದಗಿರಿ: ತೀವ್ರ ಬರದಿಂದಾಗಿ ಯಾದಗಿರಿ (Yadgiri) ಜಿಲ್ಲೆಯಲ್ಲಿ 65 ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸಿತ್ತಿವೆ. ಆದ್ದರಿಂದ ಜನ – ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಿ ಸುಶೀಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿದ್ದ ಮಾತನಾಡಿದ ಡಿಸಿ, ಜಿಲ್ಲೆಯಲ್ಲಿ ಸದ್ಯ 65 ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸಿತ್ತಿವೆ. 36 ಗ್ರಾಮಗಳಿಗೆ ಖಾಸಗಿ ಬೋರ್ವೆಲ್‌ಗಳಿಂದ ನೀರು ಪೂರೈಸಲಾಗುತ್ತಿದೆ. 28 ಗ್ರಾಮಗಳಿಗೆ ಹೊಸದಾಗಿ ಕೊಳವೆಬಾವಿ ಕೊರೆಯಿಸಿ ನೀರು ಪೂರೈಸಲಾಗುತ್ತಿದೆ. 1 ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಮುಂದಿನ ದಿನಗಳಲ್ಲೂ ನೀರಿನ ಅಭಾವ ಹೆಚ್ಚಾಗುವ ಸಾಧ್ಯತೆಗಳಿದ್ದು, ಈಗಲೇ ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿ ತಾಕೀತು ಮಾಡಿದ್ದಾರೆ. ಇದನ್ನೂ ಓದಿ: ವಿರಾಟ್ ಕೊಹ್ಲಿ ನೋಡಿದ ಖುಷಿಯಲ್ಲಿ ಏಟುಗಳು ಬಿದ್ರು ನೋವಾಗಲಿಲ್ಲ: ಕೊಹ್ಲಿ ಅಭಿಮಾನಿ ಮಾತು

ಈಗಾಗಲೇ ನಾವು ತೀವ್ರ ಬರ ಪರಿಸ್ಥಿತಿ ಎದುರಿಸುತ್ತಿದ್ದೇವೆ. ನೀರಿನ ಸಮಸ್ಯೆ ಎದುರಿಸಬಹುದಾದ ಗ್ರಾಮಗಳಲ್ಲಿ ಖಾಸಗಿ ಬೋರ್ವೆಲ್ ಗುರುತಿಸಿ, ಮಾಲೀಕರೊಂದಿಗೆ ಎಸ್.ಡಿ.ಆರ್.ಎಫ್ ನಿಯಮಾವಳಿ ಅನ್ವಯ ಒಡಂಬಡಿಕೆ ಮಾಡಿಕೊಳ್ಳಬೇಕು. ತೀವ್ರ ಬರ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸಂಬಂಧಪಟ್ಟಂತೆ ಟೆಂಡರ್ ಪ್ರಕ್ರಿಯೆಗಳ ಸಮಸ್ಯೆ ತಕ್ಷಣ ಬಗೆಹರಿಸಿಕೊಳ್ಳಬೇಕು. ಅದಕ್ಕೆ ಸೂಕ್ತ ಟಾಸ್ಕ್‌ ಫೋರ್ಸ್‌ ರಚಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಹುಲ್‌ ಗಾಂಧಿ ಕೈಯಲ್ಲಿದೆ 55,000 ಕ್ಯಾಶ್‌ – ‘ಕೈ’ ಸಂಸದನ ಆಸ್ತಿ ಎಷ್ಟು ಗೊತ್ತಾ?

ಅಲ್ಲದೇ ದುರಸ್ತಿ ಇರುವ ಪೈಪ್‌ಲೈನ್‌ಗಳನ್ನು ತಕ್ಷಣವೇ ದುರಸ್ತಿಗೊಳಿಸಿ, ನೀರು ಪೋಲಾಗದಂತೆ ಎಚ್ಚಕೆ ವಹಿಸಬೇಕು. ವಿವಿಧ ಜಲಾಶಯ ಹಾಗೂ ನದಿಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಪಂಪ್‌ಸೆಟ್‌ಗಳ ಮೂಲಕ ನೀರು ಎತ್ತುವುದನ್ನು ತಡೆಯಬೇಕು. ಆಯಾ ತಹಸಿಲ್ದಾರರು, ವಿದ್ಯುತ್ ಇಲಾಖೆಯ ಅಧಿಕಾರಿಗಳು ತಕ್ಷಣ ಹಾಗೂ ತೀವ್ರ ನಿಗಾ ಇಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿ, ಯಾವುದೇ ಪರಿಸ್ಥಿತಿಯಲ್ಲೂ ಜನ ಜಾನವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಇದನ್ನೂ ಓದಿ: 2ನೇ ಬಾರಿಗೆ ಆರ್‌ಸಿಬಿ ದಾಖಲೆ ನುಚ್ಚುನೂರು – ಐಪಿಎಲ್‌ ಇತಿಹಾಸದಲ್ಲಿ ಮತ್ತೊಂದು ವಿಶೇಷ ಸಾಧನೆ

Share This Article