ಯಾದಗಿರಿಯಲ್ಲಿ ಕುಡಿಯೋ ನೀರಿಗೂ ಹಾಹಾಕಾರ- ಕಿ.ಮೀಟರ್‌ಗಟ್ಟಲೇ ಹೋಗಿ ನೀರು ತರೋ ಪರಿಸ್ಥಿತಿ

Public TV
2 Min Read

– ಕಣ್ಮುಚ್ಚಿ ಕುಳಿತ ಜಿಲ್ಲಾಡಳಿತ

ಯಾದಗಿರಿ: ಬೇಸಿಗೆ ಮುಗಿದು, ಮಳೆಗಾಲ ಆರಂಭವಾಗಿದ್ರೂ ಬಿಸಿಲೂರು ಯಾದಗಿರಿ (Yadagiri) ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಮಾತ್ರ ಮುಕ್ತಿ ಸಿಕ್ಕಿಲ್ಲ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನೀರಿನ ಹಾಹಾಕಾರ ಶುರುವಾಗಿರೋದ್ರ ನಡುವೆಯೇ ಜಿಲ್ಲೆಯ ತಾಲೂಕು ಕೇಂದ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ (Drinking Water Problem) ತಲೆದೂರಿದೆ. ತಾಲೂಕು ಕೇಂದ್ರದ ಜನ ಕಿಲೋಮೀಟರ್ ಗಟ್ಟಲೇ ನಡೆದು ನೀರು ತರಬೇಕಾದ ದುಸ್ಥಿತಿ ಎದುರಾಗಿದೆ.

ಹೌದು. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕು ಕೇಂದ್ರವಾಗಿ 10 ವರ್ಷಗಳು ಕಳೆದಿದ್ರೂ ಇದುವರೆಗೂ ನೀರಿನ ಸಮಸ್ಯೆ ಮಾತ್ರ ಸರಿ ಹೋಗಿಲ್ಲ. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಜಲಜೀವನ್ ಮಿಷನ್ (Jal Jeevan Mission) ಈಗಾಗಲೇ ಜಿಲ್ಲೆಯಲ್ಲಿ ಮುಕ್ತಾಯದ ಹಂತ ತಲುಪಿದ್ರೂ ವಡಗೇರಾ ಜನರಿಗೆ ಮಾತ್ರ ಒಂದು ಹನಿ ನೀರು ಸಿಕ್ಕಿಲ್ಲ. ಇನ್ನೂ ಇದೇ ವಡಗೇರಾ ಗ್ರಾಮಕ್ಕೆ ಕುಡಿಯುವ ನೀರಿಗಾಗಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲೂ ನೀರು ಪೂರೈಕೆಗೆ ಯೋಜನೆ ಆರಂಭಗೊಂಡಿದ್ರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಇದನ್ನೂ ಓದಿ: ಆರಂಭದಲ್ಲೇ ಅಲುಗಾಡುತ್ತಿದೆ INDIA ಕೂಟ – ಎಎಪಿ, ಕಾಂಗ್ರೆಸ್ ಮಧ್ಯೆ ಬಿರುಕು

ಶಾಲೆಗೆ ಹೋಗಬೇಕಾದ ಮಕ್ಕಳು ನಿತ್ಯವೂ, ಶಾಲೆ ಬಿಟ್ಟು ನೀರು ತರುವುದಕ್ಕೆ ಹೋಗುವಂತಾಗಿದೆ. ಗ್ರಾಮದಿಂದಾಚೆ ಎರಡು ಕಿಲೋ ಮೀಟರ್ ದೂರದಲ್ಲಿರುವ ಬೋರ್ ವೆಲ್‍ಗೆ ಪೋಷಕರೊಟ್ಟಿಗೆ ಹೋಗಿ ಬೈಕ್, ಸೈಕಲ್ ಹಾಗೂ ತಳ್ಳೋ ಬಂಡಿಯಲ್ಲಿ ನೀರು ತರಬೇಕು. ಇಲ್ಲದಿದ್ರೆ ಜೀವಜಲಕ್ಕಾಗಿ ಬಾಯ್ತೆರೆದು ಕೂಡಬೇಕು. ತಾಲೂಕು ಕೇಂದ್ರದಲ್ಲಿಯೇ ನೀರಿಗಾಗಿ ಹಾಹಾಕಾರ ಇದ್ರೂ ಅಧಿಕಾರಿಗಳು ಎಚ್ಚೆತ್ತುಕೊಳ್ತಿಲ್ಲ. ಇನ್ನೂ ಗ್ರಾಮೀಣ ಭಾಗದಲ್ಲಿರುವ ಜನರಿಗೆ ಅದೇಗೆ ನೀರು ಕೊಡ್ತಾರೆ ಅಂತಾ ಜನರು ಆಕ್ರೋಶ ಹೊರ ಹಾಕ್ತಿದ್ದಾರೆ.

ಕುಡಿಯುವ ನೀರಿನ ಸಮಸ್ಯೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೋಟಿ ಕೋಟಿ ಹಣ ಖರ್ಚು ಮಾಡುತ್ತಿದ್ದರೂ ಜನರಿಗೆ ನೀರು ತಲುಪುತ್ತಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆಲ್ಲಾ ಕಾರಣ ಅನ್ನೋದ್ರಲ್ಲಿ ಯಾವುದೇ ಅನುಮಾನವೂ ಇಲ್ಲ. ಇನ್ಮೇಲಾದ್ರೂ ಅಧಿಕಾರಿಗಳು ಎಚ್ಚೆತ್ತುಕೊಂಡು, ಜನರ ನೀರಿನ ದಾಹ ತೀರಿಸುವ ಕಡೆ ಗಮನಹರಿಸ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್