– 256 ಕಡೆ ಖಾಸಗಿ ಬೋರ್‌ವೆಲ್ ಬಾಡಿಗೆ ಪಡೆದು ನೀರು ಸರಬರಾಜು
– 167 ಕೊಳವೆ ಬಾವಿಯಲ್ಲಿ ನೀರಿನ ಅಭಾವ
ಮಂಡ್ಯ: ಬೇಸಿಗೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳಿಗೆ ನಿಗಾವಹಿಸಲು ಅಧಿಕಾರಿಗಳು ಗಮನಹರಿಸಬೇಕು ಎಂದು ಸಚಿವ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ.
ಇಂದು ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಬೇಸಿಗೆ ಪ್ರಯುಕ್ತ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಕರ್ನಾಟಕ ಅಭಿವೃದ್ದಿ ಕಾರ್ಯಕ್ರಮಗಳ ತ್ರೈ ಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ ಮುಂದಿನ ದಿನದಲ್ಲಿ ಅಗತ್ಯಕ್ಕಿಂತ ಹೆಚ್ಚು ಮಳೆಯಾಗದಿರುವ ಹಿನ್ನೆಲೆಯಲ್ಲಿ ಸಭೆ ಮಾಡಲಾಗಿದ್ದು ಹೀಗಾಗಿ ಕುಡಿಯುವ ನೀರಿಗೆ ಸಮಸ್ಯೆಯಾಗದ ರೀತಿಯಲ್ಲಿ ಆಗತ್ಯ ಕ್ರಮ ಕೈಗೊಳ್ಳಬೇಕು ವರ್ಷದ ಆರಂಭದ ಹಿನ್ನಲೆಯಲ್ಲಿ ಕ್ರಿಯಾ ಯೋಜನೆ ರೂಪಿಸಿ ಅದಕ್ಕೆ ಅನುಮತಿ ಪಡೆದು ಜೂನ್ ಗೆ ಕಾರ್ಯ ಯೋಜನೆ ಮಾಡಬೇಕು ಎಂದು ಸೂಚನೆ ನೀಡಿದರು.

ಪ್ರತಿ ವಾರ ಟಾಸ್ಕ್ ಫೋರ್ಸ್ ಸಭೆ
ಜಿಲ್ಲೆಯಲ್ಲಿ 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಲಾಗಿದ್ದು 256 ಕಡೆ ಖಾಸಗಿ ಬೋರ್‌ವೆಲ್ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ. ಈಗಾಗಲೇ 167 ಕೊಳವೆ ಬಾವಿಯಲ್ಲಿ ನೀರಿನ ಅಭಾವ ಇದ್ದು ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಸೂಕ್ತ ಕ್ರಮ ವಹಿಸಬೇಕು. ಬರಗಾಲದ ಹಿನ್ನಲೆಯಲ್ಲಿ ಎಲ್ಲಾ ಅಧಿಕಾರಿಗಳು ಪ್ರತಿ ವಾರ ಟಾಸ್ಕ್ ಫೋರ್ಸ್ ಸಭೆ ಮಾಡಬೇಕು ಕುಡಿಯುವ ನೀರಿಗೆ ಸಮಸ್ಯೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಜಾನುವಾರುಗಳಿಗೆ ಹಸಿ ಮತ್ತು ಒಣ ಮೇವು ಸೌಲಭ್ಯವು 43 ವಾರಗಳಿಗೆ ಆಗುವಷ್ಟು ಮೇವು ಇದ್ದು ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಮೇವು ಲಭ್ಯತೆ ಇರುತ್ತದೆ ಮೇವಿಗೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಯಲ್ಲಿಗಳಲ್ಲಿ ಯಾವುದೇ ತೊಂದರೆಯಾಗದಂತೆ ವೈದ್ಯರುಗಳಿಗೆ ಕಾರ್ಯನಿರ್ವಹಿಸುವಂತೆ ಕ್ರಮ ವಹಿಸುವಂತೆ ಹೇಳಿದರು.

