ಕಾರಿನಲ್ಲೇ ಸುಟ್ಟು ಕರಕಲಾದ ಚಾಲಕ – ಸಾವಿನ ಸುತ್ತ ಅನುಮಾನದ ಹುತ್ತ

1 Min Read

ಕಾರವಾರ: ಹುಬ್ಬಳ್ಳಿ ಕಡೆಯಿಂದ ಅಂಕೋಲ ಕಡೆ ತೆರಳುತಿದ್ದ ಕಾರೊಂದು ಅಪಘಾತಕ್ಕೀಡಾಗಿ (Accident) ಬೆಂಕಿ ತಗುಲಿ, ಕಾರಿನೊಳಗಿದ್ದ (Car) ಚಾಲಕ ಸುಟ್ಟು ಕರಕಲಾದ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ.

ಅಪಘಾತದಲ್ಲಿ ಕಾರು ಚಾಲಕ ಗುರುತು ಸಿಗದಂತೆ ಸುಟ್ಟು ಕರಕಲಾಗಿದ್ದಾನೆ. ವೋಕ್ಸ್ ವ್ಯಾಗನ್ ಕಂಪನಿಗೆ ಸೇರಿದ ಕಾರು ಇದಾಗಿದೆ. ಇನ್ನೂ ಕಾರಿನಲ್ಲಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ‌ಈ ಹಿನ್ನಲೆಯಲ್ಲಿ ಕಾರು ಚಾಲಕನ ಗುರುತು ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಉಡುಪಿ| ಆಕಸ್ಮಿಕ ಬೆಂಕಿಯಿಂದ ಸುಟ್ಟು ಕರಕಲಾದ ಲಾರಿ

ಘಟನೆ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದಾವಣಗೆರೆ | ಕೌಟುಂಬಿಕ ಕಲಹ – ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಸುಟ್ಟು ಕರಕಲಾದ ಬಿಜೆಪಿ ಮುಖಂಡ

Share This Article