ಹಾವೇರಿ: ಇಟ್ಟಿಗೆ ತುಂಬಿದ ಟ್ರ್ಯಾಕ್ಟರ್ (Tractor) ಮತ್ತು ಟ್ರೇಲರ್ ನಡುವೆ ಸಿಲುಕಿ ಚಾಲಕ (Driver) ಸಾವನ್ನಪ್ಪಿರುವ ಘಟನೆ ಹಾವೇರಿ (Haveri) ತಾಲೂಕಿನ ಮರೋಳ ಗ್ರಾಮದಲ್ಲಿ ನಡೆದಿದೆ.
ಹಾವೇರಿ ತಾಲೂಕಿನ ಗುತ್ತಲ ತಾಂಡಾದ ನಿವಾಸಿ ದೇವರಾಜ್ ಲಮಾಣಿ (26) ಮೃತ ಚಾಲಕ. ದೇವರಾಜ್ ಬೆಳಗ್ಗೆ ಎರಡೂವರೆ ಸಾವಿರ ಇಟ್ಟಿಗೆ ತುಂಬಿಕೊಂಡು ಮರೋಳ ಗ್ರಾಮಕ್ಕೆ ಬಂದಿದ್ದ. ಈ ವೇಳೆ ಏಕಾಏಕಿ ಟ್ರ್ಯಾಕ್ಟರ್ನ ಎಂಜಿನ್ ಮೇಲೆ ಎದ್ದು ನಡುವಲ್ಲಿ ಸಿಲುಕಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಜಾಗಿಂಗ್ ಮಾಡುತ್ತಾ ‘ಧುರಂಧರ್’ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್ಲ್ಯಾಂಡ್ ಅಧ್ಯಕ್ಷ
ಘಟನಾ ಸ್ಥಳಕ್ಕೆ ಗುತ್ತಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹೃದಯಾಘಾತದಿಂದ ಹೆಡ್ ಕಾನ್ಸ್ಟೇಬಲ್ ಸಾವು

