ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಮಿನಿ ಟ್ರಕ್‌ವೊಂದು (Mini Truck) ಪೆಟ್ರೋಲ್ ಬಂಕ್‌ಗೆ ನುಗ್ಗಿದ ಘಟನೆ ಬೆಂಗಳೂರಿನ (Bengaluru) ಚಾಮರಾಜಪೇಟೆ (Chamrajpet) ಮುಖ್ಯರಸ್ತೆಯ ನಯಾರಾ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ.
ಚಾಮರಾಜಪೇಟೆ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸನ್‌ಪ್ಯೂರ್ ಎಣ್ಣೆ ಸಾಗಾಟ ಮಾಡುತ್ತಿದ್ದ ಟ್ರಕ್ ನುಗ್ಗಿದ ಪರಿಣಾಮ ಪೆಟ್ರೋಲ್ ಬಂಕ್‌ನ (Petrol Bunk) ಶೌಚಾಲಯದ ಕಟ್ಟಡ ಜಖಂಗೊಂಡಿದೆ. ಅಲ್ಲದೇ ಡಿಕ್ಕಿಯ ರಭಸಕ್ಕೆ ಒಂದು ಬೈಕ್ ಕೂಡ ಲಾರಿಯಡಿಗೆ ಸಿಲುಕಿ ಸಂಪೂರ್ಣ ಜಖಂಗೊಂಡಿದೆ. ಇದನ್ನೂ ಓದಿ: ಬಿಗ್‌ಬಾಸ್‌ಗೆ ಬಿಗ್ ರಿಲೀಫ್ – ಸಮಸ್ಯೆ ಇತ್ಯರ್ಥಕ್ಕೆ 10 ದಿನ ಕಾಲಾವಕಾಶ
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಆಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಗಾಯಕ ಜುಬೀನ್ ಗರ್ಗ್ ಸಾವು ಕೇಸ್; ಸಹೋದರ ಸಂಬಂಧಿ ಡಿಎಸ್‌ಪಿ ಬಂಧನ