ಡ್ರೋನ್ ಕಣ್ಗಾವಲಿನಲ್ಲಿ ಅರಣ್ಯ ರಕ್ಷಣೆಗೆ ಮುಂದಾದ ಕಾಫಿನಾಡ ಅರಣ್ಯ ಇಲಾಖೆ

Public TV
2 Min Read

ಚಿಕ್ಕಮಗಳೂರು: ಬೇಸಿಗೆಗೂ ಮುನ್ನವೇ ಸುಡು ಬಿಸಿಲ ಧಗೆಗೆ ಅರಣ್ಯವನ್ನು ಉಳಿಸುವುದೇ ಅರಣ್ಯ ಇಲಾಖೆ ದೊಡ್ಡ ಸವಾಲಾಗಿದೆ. ಹಾಗಾಗಿ ಜಿಲ್ಲೆಯ ಅರಣ್ಯ ಇಲಾಖೆ ಅಧಿಕಾರಿಗಳು ನೂರಾರು ಕಿ.ಮೀ. ಫೈಲ್ ಲೈನ್ ನಿರ್ಮಿಸುವುದರ ಜೊತೆ ಡ್ರೋನ್ ಕಣ್ಗಾವಲಿನಲ್ಲಿ ಅರಣ್ಯವನ್ನು ರಕ್ಷಿಸಲು ಮುಂದಾಗಿದ್ದಾರೆ.

ಈಗಾಗಲೇ ಜಿಲ್ಲೆಯಾದ್ಯಂತ ನೂರಾರು ಕಿ.ಮೀ. ಫೈರ್ ಲೈನ್ ನಿರ್ಮಿಸಿರೋ ಅರಣ್ಯ ಇಲಾಖೆ ಮುತ್ತೋಡಿ, ಹೆಬ್ಬೆ, ಲಕ್ಕವಳ್ಳಿ, ತಣಿಗೇಬೈಲು ಸೇರಿದಂತೆ ಜಿಲ್ಲೆಯ ನಾಲ್ಕು ಅರಣ್ಯ ವಲಯದಲ್ಲೂ ಆಂಟಿಫೆಚಿಂಗ್ ಹಾಗೂ 13 ಫೈರ್ ಡಿಟೆಕ್ಷನ್ ತಂಡಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸರ್ಕಾರ ಜಿಲ್ಲೆಯ 4 ವಲಯಗಳಿಗೂ 9 ಲಕ್ಷದಂತೆ 36 ಲಕ್ಷ ಹಣ ಬಿಡುಗಡೆ ಮಾಡಿದೆ. ಅರಣ್ಯ ಇಲಾಖೆ ಬೆಂಕಿ ನಂದಿಸಲು ಬೇಕಾದ ಅಗತ್ಯ ವಸ್ತುಗಳನ್ನು ಕೂಡ ಶೇಖರಿಸಿದೆ. ಸಿಬ್ಬಂದಿಗಳು ಕೂಡ ಗಸ್ತು ತಿರುಗುತ್ತಿದ್ದಾರೆ. ಇದನ್ನೂ ಓದಿ: ಭವಿಷ್ಯದಲ್ಲಿ ಗಾಳಿ ಗಂಡಾಂತರ ಬಂದು ತಿನ್ನಲು ಅನ್ನವಿಲ್ಲದ ಸ್ಥಿತಿ ಬರಲಿದೆ: ಕೋಡಿ ಶ್ರೀಗಳ ಭವಿಷ್ಯ

ಬೆಂಕಿ ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಂತೆ ಕಟ್ಟುನಿಟ್ಟಿನ ಆದೇಶವಿದೆ. ಅರಣ್ಯ ವಾಸಿಗಳಿಗೂ ಕೂಡ ಕಾಡಿನ ರಕ್ಷಣೆ ಬಗ್ಗೆ ತರಬೇತಿ ನೀಡಿ, ಜಾಗೃತಿ ಮೂಡಿಸಿದ್ದಾರೆ. ಬಿತ್ತಿಪತ್ರ, ಕರಪತ್ರ, ಬೀದಿ ನಾಟಕಗಳ ಮೂಲಕವೂ ಅರಣ್ಯ ರಕ್ಷಣೆಯ ಬಗ್ಗೆ ಕಾಡಿನ ಮಕ್ಕಳಿಗೆ ಅಧಿಕಾರಿಗಳು ಮಾಹಿತಿ ನೀಡುತ್ತಿದ್ದಾರೆ. ಫೈರ್ ಲೈನ್ ಯೋಜನೆ ಕಾಡು ಪ್ರಾಣಿಗಳ ರಕ್ಷಣೆಗೂ ಸಹಕಾರಿಯಾಗಿದೆ.

ಸೂಕ್ಷ್ಮ ಅರಣ್ಯ ಪ್ರದೇಶದಲ್ಲಿ ಫೈರ್ ಕ್ಯಾಂಪ್ ನಿರ್ಮಿಸಿ 24 ಗಂಟೆಗಳ ಕಾಲವೂ ಸಿಬ್ಬಂದಿಗಳನ್ನು ಅರಣ್ಯ ರಕ್ಷಣೆಗೆ ನೇಮಿಸಿದ್ದು ಈ ಬಾರಿ ಇಲಾಖೆ ಕಿಡಿಗೇಡಿಗಳಿಂದ ಬೀಳುವ ಬೆಂಕಿಯನ್ನು ಸೆರೆಹಿಡಿಯುಲು ಡ್ರೋನ್ ಕ್ಯಾಮೆರಾ ಬಳಸುತ್ತಿದೆ. ಸೂಕ್ಷ್ಮ, ಅತೀ ಸೂಕ್ಷ್ಮ ಅರಣ್ಯ ಪ್ರದೇಶದಲ್ಲಿ ಡ್ರೋನ್ ಕ್ಯಾಮೆರಾ ಬಳಸಿ, ಯಾರೇ ಅರಣ್ಯಕ್ಕೆ ಬೆಂಕಿ ಇಟ್ಟರೂ ಆ ದೃಶ್ಯವನ್ನು ಸೆರೆ ಹಿಡಿದು ಆರೋಪಿಗಳ ಹೆಡೆಮುರಿ ಕಟ್ಟಲು ಇಲಾಖೆ ಸನ್ನದ್ಧವಾಗಿದೆ. ಇದನ್ನೂ ಓದಿ: ಹಿಜಬ್ ವಿವಾದ: ಕಾಲೇಜುಗಳಿಗೆ ಫೆ.16ರವರೆಗೂ ರಜೆ ಘೋಷಿಸಿದ ಸರ್ಕಾರ

ವಿಶ್ವದ ಅತ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾಗಿರುವ ಪಶ್ಚಿಮಘಟ್ಟಗಳ ಸೌಂದರ್ಯದ ಶಕ್ತಿಯೇ ಶೋಲಾ ಕಾಡುಗಳು. ನೀರನ್ನು ಹಿಡಿದಿಟ್ಟುಕೊಂಡು ವರ್ಷ ಪೂರ್ತಿ ಹರಿಸುವ ಸಾಮರ್ಥ್ಯವಿರೋ ಶೋಲಾ ಕಾಡುಗಳು ಕೂಡ ಈ ಬಾರಿ ಬಿಸಿಲ ಧಗೆಯಿಂದ ಸುಡುತ್ತಿವೆ. ಸುಡು ಬಿಸಿಲ ಧಗೆಗೆ ಶೋಲಾ ಕಾಡುಗಳು ಕೂಡ ವರ್ಷದಿಂದ ವರ್ಷಕ್ಕೆ ಕ್ರಮೇಣ ತನ್ನ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಿವೆ. ಬಿಸಿಲಿನ ತಾಪದ ತೀವ್ರತೆಯಿಂದ ಶೋಲಾ ಕಾಡುಗಳು ಸೇರಿದಂತೆ ಅಲ್ಲಲ್ಲೇ ಅರಣ್ಯ ಬೆಂಕಿಗಾಹುತಿಯಾಗುತ್ತಿದೆ. 2004ರಲ್ಲಿ ಮುತ್ತೋಡಿಯಲ್ಲಿನ ಕಾಡ್ಗಿಚ್ಚಿನ ದುರಂತದಿಂದ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ, ಬೆಂಕಿಯಿಂದ ಕಾಡನ್ನು ರಕ್ಷಿಸಲು ಸೂಕ್ತ ಕ್ರಮಕೈಗೊಳ್ಳುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *