ನಕಲಿ ಅಡ್ರೆಸ್ ಕೊಟ್ಟು ಮಾದಕ ವಸ್ತು ಕೊರಿಯರ್ – 2 ತಿಂಗಳಾದ್ರೂ ಪತ್ತೆಯಾಗಿಲ್ಲ ವಿಳಾಸ

Public TV
1 Min Read

ಬೆಂಗಳೂರು: ನ್ಯೂ ಇಯರ್ (New Year) ಹತ್ತಿರವಾಗುತ್ತಿದ್ದಂತೆ ಮಾದಕ ವಸ್ತುಗಳ ಮೂಲಗಳ ಬಗ್ಗೆ ಹಲವು ಕುತೂಹಲಕಾರಿ ವಿಚಾರಗಳು ಬೆಳಕಿಗೆ ಬರುತ್ತಿವೆ.

ವಿದೇಶಗಳಿಂದ ವಿವಿಧ ಬಗೆಯ ಡ್ರಗ್ಸ್ ಬೆಂಗಳೂರಿಗೆ ಕೊರಿಯರ್‌ಗಳ ಮೂಲಕ ಬರುತ್ತಿವೆ ಎಂಬ ಮಾಹಿತಿ ಸಿಕ್ಕಿತ್ತು. ಈ ಮಾಹಿತಿ ಆಧರಿಸಿದ ಸಿಸಿಬಿ ಪೊಲೀಸರು (CCB Police) ಕಳೆದ ಅಕ್ಟೋಬರ್ 20ರಂದು ಬೆಂಗಳೂರಿನ (Bengaluru) ಚಾಮರಾಜಪೇಟೆಯ (Chamarajpet) ಫಾರಿನ್ ಪೋಸ್ಟ್ ಆಫೀಸ್ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ಅನುಮಾನಾಸ್ಪದ 3,500 ಕೊರಿಯರ್‌ಗಳನ್ನು ಪರಿಶೀಲಿಸಿದ ವೇಳೆ 606 ಕೊರಿಯರ್‌ಗಳಲ್ಲಿ ಬರೋಬ್ಬರಿ 21 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿತ್ತು. ಇದನ್ನೂ ಓದಿ: ಸಿರಿಯಾದಲ್ಲಿ ಭಾರತೀಯ ಪ್ರಜೆಗಳು ಸೇಫ್‌ – ರಾಯಭಾರ ಕಚೇರಿಯಿಂದ ಮಾಹಿತಿ

ಡ್ರಗ್ಸ್ ಪತ್ತೆಯಾದ 606 ಕೊರಿಯರ್‌ಗಳ ಬೆನ್ನತ್ತಿದ ಪೊಲೀಸರಿಗೆ ಶಾಕ್ ಕಾದಿತ್ತು. ಯಾಕಂದರೆ ಅಷ್ಟೂ ಕೊರಿಯರ್‌ಗಳ ಅಡ್ರೆಸ್‌ಗಳು ನಕಲಿಯಾಗಿದ್ದವು. ಕಳೆದ ಎರಡು ತಿಂಗಳಲ್ಲಿ ಒಂದೇ ಒಂದು ಅಡ್ರೆಸ್ ಕೂಡ ಪೊಲೀಸರಿಗೆ ಪತ್ತೆಯಾಗಿಲ್ಲ. ಈ ನಡುವೆ ನ್ಯೂ ಇಯರ್ ಕೂಡ ಹತ್ತಿರ ವಾಗುತ್ತಿದ್ದು, ಶನಿವಾರವಷ್ಟೇ ಪೋಸ್ಟ್ ಆಫೀಸ್‌ಗಳು, ಖಾಸಗಿ ಕೋರಿಯರ್ ಆಫೀಸ್‌ಗಳು, ಟ್ರಾವೆಲ್ ಏಜೆನ್ಸಿಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿವೆ.  ಇದನ್ನೂ ಓದಿ: ಸರ್ಕಾರದ ಬೊಕ್ಕಸ ಬರಿದಾಗಿ ಕಳಪೆ ಔಷಧ ಖರೀದಿ, ಬಾಣಂತಿಯರ ಸಾವಿಗೆ ಇದೇ ಕಾರಣ: ಜೋಶಿ

ತಪ್ಪು ಅಡ್ರೆಸ್ ಇರುವ ಕೊರಿಯರ್‌ಗಳು ಅಡ್ರೆಸ್‌ಗೆ ಹೋಗಿ ವಾಪಸ್ ಬರುತ್ತವೆ. ನಂತರ ಕೊರಿಯರ್ ಆಫೀಸ್‌ಗಳಿಗೆ ಬಂದು ಬಳಕೆದಾರರು, ಅಥವಾ ಪೆಡ್ಲರ್‌ಗಳು ಡ್ರಗ್ಸ್ ಇರುವ ಕೋರಿಯರ್ ತೆಗೆದುಕೊಂಡು ಹೋಗುತ್ತಿದ್ದಾರೆ. ಇನ್ನೂ ಕೆಲ ಕಡೆಗಳಲ್ಲಿ ಅಲ್ಲಿನ ಸಿಬ್ಬಂದಿಗಳೇ ಈ ದಂಧೆಯಲ್ಲಿ ಭಾಗಿಯಾಗಿದ್ದು, ತಲುಪಿಸಬೇಕಾದ ಕಡೆಗೆ ತಲುಪಿಸುತ್ತಿದ್ದಾರೆ. ಸದ್ಯ ಇನ್ನೂ ತನಿಖೆ ಮುಂದುವರೆದಿದ್ದು, ಇನ್ನೂ ಯಾವೆಲ್ಲಾ ರೀತಿಯ ಪೆಡ್ಲಿಂಗ್ ನಡೆಯುತ್ತಿದೆ ಎಂಬುದು ತನಿಖೆ ನಂತರವೇ ಗೊತ್ತಾಗಬೇಕಿದೆ. ಇದನ್ನೂ ಓದಿ: ಬಳ್ಳಾರಿ ಬಳಿಕ ಬೆಳಗಾವಿಯಲ್ಲೂ ಬಾಣಂತಿಯರು, ಶಿಶುಗಳ ಸಾವು!

Share This Article