ಮಂಗಳೂರಿನ ಪೆಡ್ಲರ್‌ಗಳಿಗೆ ಮಾದಕವಸ್ತು ಸಪ್ಲೈ – 4 ಕೋಟಿ ಮಾಲು ಸಮೇತ ಸಿಕ್ಕಿಬಿದ್ದ ಉಗಾಂಡ ಮಹಿಳೆ

1 Min Read

– ಮಂಗಳೂರಿನ 6 ಪೆಡ್ಲರ್‌ಗಳು ಅರೆಸ್ಟ್‌

ಮಂಗಳೂರು: ಡ್ರಗ್ಸ್‌ ಪೆಡ್ಲರ್‌ಗಳಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಉಗಾಂಡ ದೇಶದ ಮಹಿಳೆಯನ್ನು ಮಂಗಳೂರು (Mangaluru) ಸಿಸಿಬಿ ಪೊಲೀಸರು (CCB Polic) ಬೆಂಗಳೂರಿನಲ್ಲಿ (Bengaluru) ಬಂಧಿಸಿದ್ದಾರೆ.

ಬಂಧಿತ ಮಹಿಳೆಯನ್ನು ಉಗಾಂಡಾ ಮೂಲದ ಝಾಲಿಯಾ ಝಲ್ವಾಂಗೋ ಎಂದು ಗುರುತಿಸಲಾಗಿದೆ. ಈಕೆ ಮಂಗಳೂರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದಳು. ಆರೋಪಿಯ ಮಾಹಿತಿ ಕಲೆಹಾಕಿದ್ದ ಪೊಲೀಸರು ಬೆಂಗಳೂರಿನ ಜಿಗಣಿ ಸರಹದ್ದಿನಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಆಕೆಯ ಬಳಿ 4 ಕೋಟಿ ರೂ. ಮೌಲ್ಯದ 4 ಕೆಜಿ ಎಂಡಿಎಂಎ ಡ್ರಗ್ಸ್ ಪತ್ತೆಯಾಗಿದೆ. ಇದನ್ನೂ ಓದಿ: ಗೆಳೆಯನಿಗಾಗಿ ಡ್ರಗ್ಸ್‌ ಮಾರಾಟ – ಮಹಿಳಾ ಟೆಕ್ಕಿ ಸೇರಿದಂತೆ ನಾಲ್ವರು ಅರೆಸ್ಟ್‌

ಪ್ರಕರಣದಲ್ಲಿ ಮಂಗಳೂರಿನ 6 ಮಂದಿ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಕಿಕ್ಕೇರಿಸಲು ತಂದಿದ್ದ 18 ಕೋಟಿ ಮೌಲ್ಯದ ಡ್ರಗ್ಸ್‌ ಸೀಜ್ – 10 ಮಂದಿ ಅರೆಸ್ಟ್‌

Share This Article