ಬೆಂಗಳೂರು | ಎನ್‌ಸಿಬಿ ಅಧಿಕಾರಿಗಳ ಭರ್ಜರಿ ಬೇಟೆ – 50 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

Public TV
1 Min Read

– ಓರ್ವ ಲಂಕಾ ಪ್ರಜೆ ಸೇರಿ ಮೂವರ ಬಂಧನ

ಬೆಂಗಳೂರು: ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ಎನ್‌ಸಿಬಿ ಅಧಿಕಾರಿಗಳು (NCB Officers) 50 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು (Narcotics) ಜಪ್ತಿ ಮಾಡಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಕಾರ್ಯಾಚರಣೆ ವೇಳೆ ಮೂವರು ಆರೋಪಿಗಳನ್ನ ಎನ್‌ಸಿಬಿ ಬಂಧಿಸಿದೆ. ಬಂಧಿತರಿಂದ ಒಟ್ಟು 45 ಕೆ ಜಿ ಹೈಡ್ರೋಗಾಂಜಾ, 6 ಕೆಜಿ ಸೈಲೋಸಿಬಿನ್ ಅಣಬೆಯನ್ನ ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: ಬಿಹಾರದಲ್ಲಿ ಸೀಟು ಹಂಚಿಕೆ ಇತ್ಯರ್ಥ – ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ

ಮೊದಲಿಗೆ ಥೈಲ್ಯಾಂಡ್‌ನಿಂದ ಡ್ರಗ್ಸ್‌ ಸಾಗಾಟ ಮಾಡುತ್ತಿರುವುದಾಗಿ ಅಧಿಕಾರಿಗಳಿಗೆ ಮಾಹಿತಿ ಬಂದಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ಅಧಿಕಾರಿಗಳು ಕೊಲಂಬೋದಿಂದ‌ ಬರ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಬಂಧಿತರಿಂದ 31 ಕೆಜಿ ಹೈಡ್ರೋಗಾಂಜಾ, 4 ಕೆಜಿ ಸೈಲೋಸಿಬಿನ್ ಅಣಬೆ ಜಪ್ತಿ ಮಾಡಿದ್ದರು. ಇವರಿಬ್ಬರ ವಿಚಾರಣೆ ವೇಳೆ ಮುಂದಿನ ಫ್ಲೈಟ್‌ನಲ್ಲಿ ಹ್ಯಾಂಡ್ಲರ್‌ ಶ್ರೀಲಂಕಾದಿಂದ ಬರುವ ಮಾಹಿತಿ ಸಿಕ್ಕಿತ್ತು. ಅದರಂತೆ ಕಾದು ಕುಳಿತಿದ್ದ ಅಧಿಕಾರಿಗಳು ಶ್ರೀಲಂಕಾದ ಪ್ರಜೆಯನ್ನೂ ಬಂಧಿಸಿ, ಆತನ ಬಳಿಯಿದ್ದ 14 ಕೆ ಜಿ ಹೈಡ್ರೋಗಾಂಜಾ, 2 ಕೆಜಿ ಅಣಬೆಯನ್ನು ಜಪ್ತಿ ಮಾಡಿದರು.

ಆರೋಪಿಗಳು ಒಟ್ಟು 250 ಫುಡ್‌ ಟಿನ್‌ಗಳಲ್ಲಿ ಡ್ರಗ್ಸ್ ಸೀಲ್ ಮಾಡಿಕೊಂಡು ಬಂದಿದ್ದರು. ಇನ್ನೂ ಈ ವರ್ಷ ಎನ್‌ಸಿಬಿ 100 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದೆ. 18 ಕೇಸ್‌ಗಳಲ್ಲಿ ಪ್ರಕರಣಗಳಲ್ಲಿ 45 ಆರೋಪಿಗಳನ್ನ ಬಂಧಿಸಲಾಗಿದೆ. ಕೇರಳ, ರಾಜಸ್ಥಾನ, ಗುಜರಾತ್, ಮಾಹಾರಾಷ್ಟ್ರದಲ್ಲಿ ಗಾಂಜಾ ದಂಧೆ ನಡೆಸುತ್ತಿದ್ದ ಆರೋಪಿಗಳು ಎನ್‌ಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ʻಏಯ್ ಕರಿ ಟೋಪಿ ಎಂಎಲ್‌ಎ ಬಾರಪ್ಪʼ – ಡಿಕೆಶಿ Vs ವರ್ಸಸ್ ಮುನಿರತ್ನ ನಡ್ವೆ ʻಕರಿ ಟೋಪಿʼ ಕದನ!

Share This Article