ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ (Bengaluru) ಹೊಸ ವರ್ಷಾಚರಣೆಗೆ (New year 2026) ಕೌಂಟ್‍ಡೌನ್ ಶುರುವಾಗಿದ್ದು, ನ್ಯೂ ಇಯರ್ ಸೆಲಬ್ರೇಷನ್ ಸಂದರ್ಭದಲ್ಲಿ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ಪೊಲೀಸರು ಡ್ರಂಕ್ & ಡ್ರೈವ್ ತಪಾಸಣೆ ಚುರುಕುಗೊಳಿಸಿದ್ದಾರೆ.
ತಡರಾತ್ರಿ ನಗರದ 140 ಪಾಯಿಂಟ್‌ಗಳಲ್ಲಿ ತಪಾಸಣೆ ನಡೆಸಿ ಸುಮಾರು 500ಕ್ಕೂ ಹೆಚ್ಚು ಕೇಸ್‌ಗಳು ದಾಖಲು ಮಾಡಲಾಗಿದೆ. ಕಳೆದ ಮೂರು ದಿನಗಳಲ್ಲಿ 1500ಕ್ಕೂ ಹೆಚ್ಚು ಕೇಸ್ ದಾಖಲಾಗಿದೆ. ಕುಡಿದು ವಾಹನ ಚಲಾಯಿಸುತ್ತಿದ್ದ (Drunk and Drive ) ಚಾಲಕರಿಗೆ ರಶೀದಿ ನೀಡಿ ಹಣ ಪಾವತಿಸಲು ಸೂಚನೆ ಕೊಡಲಾಗಿದೆ. ತಪಾಸಣೆ ವೇಳೆ ಸಿ ಬರ್ಡ್ ಬಸ್ ಚಾಲಕನೋರ್ವ ಸಿಕ್ಕಿಬಿದ್ದಿದ್ದಾನೆ. ಕೆಲ ದಿನಗಳ ಹಿಂದಷ್ಟೇ ಸೀಬಸ್ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದರು. ಇದನ್ನೂ ಓದಿ: ಉಡುಪಿ| ಮೂರು ಕಡೆಯಿಂದ ಸುತ್ತುವರಿದು ಚಿನ್ನ ಎಗರಿಸ್ತಿದ್ದ ಕಳ್ಳಿಯರ ಗ್ಯಾಂಗ್ ಅಂದರ್
ದೆಹಲಿ ಪೊಲೀಸರು ಸಹ ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಆಪರೇಷನ್ ಆಘಾಟ್ 3.0 ಅಡಿಯಲ್ಲಿ 660ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಅಕ್ರಮ ಶಸ್ತ್ರಾಸ್ತ್ರಗಳು, ಲಕ್ಷಾಂತರ ನಗದು, ಅಕ್ರಮ ಮದ್ಯ, ಮಾದಕ ವಸ್ತುಗಳು ಮತ್ತು ಕದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅಪಾಯಕಾರಿ ಹಾಗೂ ಉದ್ದೇಶಪೂರ್ವಕವಾಗಿ ಗಲಭೆ ಸೃಷ್ಟಿಸುವ ಅನುಮಾಸ್ಪದ ವ್ಯಕ್ತಿಗಳನ್ನು ಬಂಧನ ಮಾಡಲಾಗಿದೆ. ಇದನ್ನೂ ಓದಿ: ಆಪರೇಷನ್ ಆಘಾಟ್ 3.0 – ದೆಹಲಿ ಪೊಲೀಸರಿಂದ 600ಕ್ಕೂ ಹೆಚ್ಚು ಮಂದಿ ಬಂಧನ

