ಬೆಂಗಳೂರು: ಕುಡಿದ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಪರಿಣಾಮ ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ (Anekal) ತಾಲೂಕಿನ ಹೆಬ್ಬಗೋಡಿ (Hebbagodi) ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮಸಂದ್ರದಲ್ಲಿ (Kammasandra) ನಡೆದಿದೆ.
ಹೆಬ್ಬಗೋಡಿ ನಿವಾಸಿ ಪ್ರಶಾಂತ್(28) ಮೃತ ವ್ಯಕ್ತಿ. ಅಪಘಾತದಲ್ಲಿ ರೋಶನ್ ಹೆಗ್ಗಡೆ (27) ಗಂಭೀರ ಗಾಯಾಗೊಂಡಿದ್ದಾನೆ. ಭಾನುವಾರ ಕ್ರಿಕೆಟ್ ಮ್ಯಾಚ್ ಮುಗಿಸಿ ಸಂಜೆ ಎಣ್ಣೆಪಾರ್ಟಿ ಮಾಡಿದ್ದರು. ಎಣ್ಣೆಪಾರ್ಟಿ ವೇಳೆ ಇಬ್ಬರ ನಡುವೆ ಕಿರಿಕ್ ನಡೆದಿದ್ದು, ಮನೆ ಕಡೆ ಹೊರಡುವ ವೇಳೆ ಕಾರಿನಲ್ಲಿಯು ಕಿರಿಕ್ ಮುಂದುವರಿದಿತ್ತು. ಇದನ್ನೂ ಓದಿ: 77ನೇ ಗಣರಾಜ್ಯೋತ್ಸವ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ
ಕಾರು ಚಲಾಯಿಸುತ್ತಿದ್ದ ರೋಷನ್ ಹೆಗ್ಗಡೆಗೆ ಅವ್ಯಾಚ ಶಬ್ದಗಳಿಂದ ನಿಂದನೆ ಮಾಡಿದ್ದರಿಂದ ಆಕ್ರೋಶಗೊಂಡ ರೋಷನ್ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದಾನೆ. ಈ ವೇಳೆ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪ್ರಶಾಂತ್ ಮತ್ತು ರೋಷನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಪ್ರಶಾಂತ್ ಮೃತಪಟ್ಟಿದ್ದು, ಗಾಯಾಳು ರೋಷನ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭೀಕರ ಅಪಘಾತದ ದೃಶ್ಯ ಕಾರಿನ ಡ್ಯಾಶ್ ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ತುಮಕೂರಿನಲ್ಲಿ ಭೀಕರ ಅಪಘಾತ – ಸ್ಥಳದಲ್ಲೇ ಮೂವರು ದುರ್ಮರಣ

