ಬೆಂಗಳೂರು: ಕುಡಿದ ಮತ್ತಲ್ಲಿ ಸ್ನೇಹಿತರ (Friends) ನಡುವೆ ಕಿರಿಕ್ ಉಂಟಾಗಿ ಗೆಳೆಯನ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು (Bengaluru) ಹೊರವಲಯ ಸರ್ಜಾಪುರ (Sarjapura) ಸಮೀಪದ ಮಟ್ಟನಹಳ್ಳಿ (Mattanahalli) ಕೆರೆ ಬಳಿ ನಡೆದಿದೆ.
ಮೋಹನ್(25) ಕೊಲೆಯಾದ ಯುವಕ. ತಮಿಳುನಾಡಿನ ಸಿಂಗಸದನಪಲ್ಲಿ ಗ್ರಾಮದವನಾದ ಮೋಹನ್ ಗುರುವಾರ ಸಂಜೆ ಸ್ನೇಹಿತನ ಜೊತೆ ಎಣ್ಣೆ ಪಾರ್ಟಿ ಮಾಡಲು ಬಂದಿದ್ದ. ಸ್ನೇಹಿತ ಮನೋಜ್ ಮತ್ತು ಮೋಹನ್ ಕಂಠಪೂರ್ತಿ ಕುಡಿದಿದ್ದರು. ಕುಡಿದ ನಶೆಯಲ್ಲಿ ಮೋಹನ್ ಮತ್ತು ಮನೋಜ್ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮನೋಜ್ ಅಲ್ಲೇ ಇದ್ದ ಕಲ್ಲನ್ನ ಮೋಹನ್ ತಲೆ ಮೇಲೆ ಎತ್ತಿಹಾಕಿದ್ದಾನೆ. ಘಟನೆ ಪರಿಣಾಮ ಮೋಹನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ರಾಜ್ಯದಲ್ಲಿ ಟ್ರೆಕ್ಕಿಂಗ್ಗೆ ಹೊಸ ಗೈಡ್ಲೈನ್ಸ್ – ಚಾರಣಿಗರ ಮೊಬೈಲ್ಗೆ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ: ಈಶ್ವರ್ ಖಂಡ್ರೆ
ಘಟನಾ ಸ್ಥಳಕ್ಕೆ ಬೆಂ.ಗ್ರಾಮಾಂತರ ಎಸ್ಪಿ ಚಂದ್ರಕಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆರೋಪಿ ಮನೋಜ್ನನ್ನು ಸರ್ಜಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

