ಪ್ರಧಾನಿ ಮೋದಿಗೆ ಧನ್ಯವಾದ ಹೇಳಿ INDIA ವಿರುದ್ಧ ಹೆಚ್‌ಡಿಡಿ ಅಸಮಾಧಾನ

Public TV
1 Min Read

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಇಂದು ನಡೆಯುವ ಐತಿಹಾಸಿಕ ಕ್ಷಣಕ್ಕೆ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಕುಟುಂಬ ಸಾಕ್ಷಿಯಾಗುತ್ತಿದೆ.

ಭಾನುವಾರ ಹೆಚ್‌ಡಿಡಿ (HD Devegowda) ಕುಟುಂಬ ಅಯೋಧ್ಯೆಯತ್ತ ತೆರಳಿದೆ. ಇಂದು ರಾಮಮಂದಿರಲ್ಲಿ ನಡೆಯುವ ಬಾಲರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಧನ್ಯವಾದಗಳನ್ನು ತಿಳಿಸುವುದರ ಜೊತೆಗೆ ಕಾಂಗ್ರೆಸ್‌ ನಾಯಕರ ವಿರುದ್ಧ ಅಸಮಾಧಾನವನ್ನು ಕೂಡ ಹೊರಹಾಕಿದರು. ಇದನ್ನೂ ಓದಿ: ಆ ’84 ಸೆಕೆಂಡ್‌’ ನಡುವೆಯೇ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಯಾಕೆ?

ಇಂದು ಅಯೋಧ್ಯೆಯಲ್ಲಿ (Ayodhya Ram Mandir) ನಡೆಯಲಿರುವ ಕಾರ್ಯಕ್ರಮವು ಐತಿಹಾಸಿಕವಾಗಿದೆ. ಈ ಸಂದರ್ಭದಲ್ಲಿ ನಾನು ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ತಿಳಿಸಲು ಬಯಸುತ್ತೇನೆ ಎಂದರು. ಇದೇ ವೇಳೆ INDIA ನಾಯಕರು ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸದಿರುವ ಬಗ್ಗೆ ಪ್ರತಿಕ್ರಿಯಿಸಿದ ಹೆಚ್‌ಡಿಡಿ, ಇದು ಅವರು ತೆಗೆದುಕೊಂಡ ನಿಲುವಾಗಿದೆ. ಆದರೆ ಇದು ಸರಿಯಾದ ನಿರ್ಧಾರವಲ್ಲ ಎಂದು ಹೇಳಿದರು.

ಅಯೋಧ್ಯೆಯ ರಾಮಮಂದಿರದಲ್ಲಿ ಇಂದು ಮಧ್ಯಾಹ್ನ 12 ಗಂಟೆ 29 ನಿಮಿಷ 8 ಸೆಕೆಂಡ್‌ನಿಂದ 12 ಗಂಟೆ 30 ನಿಮಿಷ 32 ಸೆಕೆಂಡ್‌ ನಡುವಿನ 84 ಸೆಕೆಂಡ್‌ಗಳ ಅವಧಿಯನ್ನು ಪ್ರಾಣಪತ್ರಿಷ್ಠಾಪನೆ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಆಗಮಿಸಿದ್ದು, ಪ್ರಧಾನಿ ಬರುವಿಕೆಗಾಗಿ ಕಾಯುತ್ತಿದ್ದಾರೆ. ಜೊತೆಗೆಈಗಾಗಲೇ ಚಿತ್ರನಟರು, ರಾಜಕೀಯ ವ್ಯಕ್ತಿಗಳು ಆಗಮಿಸುತ್ತಿದ್ದಾರೆ.

Share This Article