KMF ನಿರ್ಲಕ್ಷ್ಯದಿಂದ ನಮ್ಮ ಮೆಟ್ರೋದಲ್ಲಿ ನಂದಿನಿ ಮಳಿಗೆ ಹಾಕಲು ಅವಕಾಶ ಸಿಕ್ಕಿಲ್ಲ – ಭೀಮಾ ನಾಯಕ್

Public TV
1 Min Read

ಬೆಂಗಳೂರು: ಕೆಎಂಎಫ್ (KMF) ನಿರ್ಲಕ್ಷ್ಯದಿಂದಾಗಿ ನಮ್ಮ ಮೆಟ್ರೋದಲ್ಲಿ ನಂದಿನಿ ಮಳಿಗೆ ಹಾಕಲು ಸಾಧ್ಯವಾಗಿಲ್ಲ ಎಂದು ಮಾಜಿ ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ (Bhima Naik) ಆರೋಪಿಸಿದ್ದಾರೆ.

ನಮ್ಮ ಮೆಟ್ರೋದಲ್ಲಿ ನಂದಿನಿ (Nandini) ಮಳಿಗೆಗೆ ಅವಕಾಶ ಕೊಡದ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಕೆಎಂಎಫ್ ಕಡೆಯಿಂದ ನಿರ್ಲಕ್ಷ್ಯ ಆಗಿರಬಹುದು. ನಾನು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಈಗ ನಂದಿನಿಗೆ ಅವಕಾಶ ಕೊಡಲಾಗುತ್ತದೆ ಎಂದು ಮಾತುಕತೆ ನಡೆಯುತ್ತಿದೆ. ಮುಂದೆ ಏನಾಗುತ್ತದೆ ಎಂದು ಕಾದುನೋಡಬೇಕು ಎಂದಿದ್ದಾರೆ.ಇದನ್ನೂ ಓದಿ: ಗೃಹ ಲಕ್ಷ್ಮಿ ಹಣ ಮೇ ತಿಂಗಳದ್ದು ಮಾತ್ರ ಬಾಕಿಯಿದೆ: ಹೆಬ್ಬಾಳ್ಕರ್

ಕೆಎಂಎಫ್ ಟೆಂಡರ್‌ನಲ್ಲಿ ಭಾಗಿಯಾಗಬೇಕಿತ್ತು. ಆದರೆ ಯಾಕೆ ಭಾಗಿಯಾಗಿಲ್ಲ ಎಂದು ಗೊತ್ತಿಲ್ಲ. ಟೆಂಡರ್‌ನಲ್ಲಿ ಭಾಗಿಯಾಗದೇ ಇರುವುದು ತಪ್ಪು. ನಮ್ಮ ಲೋಪ ಇದೆ. ಮೊದಲೇ ಸಿಎಂ, ಡಿಸಿಎಂ ಅವರನ್ನು ಭೇಟಿಯಾಗಿ ಈ ಬಗ್ಗೆ ಮಾತಾಡಬೇಕಿತ್ತು. ಮಾಹಿತಿ ಕೊರತೆಯಿಂದಾಗಿ ಹೀಗೆ ಆಗಿರಬಹುದು ಎಂದು ತಿಳಿಸಿದ್ದಾರೆ.

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಮ್ಮ ನಂದಿನಿಗೆ ಮನ್ನಣೆ ಕೊಡದೇ ಹೊರರಾಜ್ಯದ ಅಮುಲ್‌ಗೆ ಆದ್ಯತೆ ಕೊಟ್ಟು ಕಿಯೋಸ್ಕ್‌ಗಳನ್ನು ಸ್ಥಾಪಿಸಿದ್ದು ಕನ್ನಡಿಗರ ಆಕ್ರೋಶ ಕಾರಣವಾಗಿತ್ತು. ಗುಜರಾತ್ (Gujarat) ಕೋ-ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ ಲಿಮಿಟೆಡ್ ಅಥವಾ ಅಮುಲ್ ಜೊತೆ ಬೆಂಗಳೂರಿನ 10 ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಕಿಯೋಸ್ಕ್‌ಗಳನ್ನು ಸ್ಥಾಪಿಸಲು ಪರವಾನಗಿ ಒಪ್ಪಂದಕ್ಕೆ ಬಿಎಂಆರ್‌ಸಿಎಲ್ (BMRCL) ಸಹಿ ಹಾಕಿದೆ. ಈ ಮೂಲಕ ನಮ್ಮ ರಾಜ್ಯದ ಮೆಟ್ರೋ ನಿಲ್ದಾಣಗಳಲ್ಲಿ ಗುಜರಾತ್‌ನ ಅಮುಲ್ ಬ್ರ‍್ಯಾಂಡ್ ಅನ್ನು ಪ್ರಮೋಷನ್ ಮಾಡಲಾಗುತ್ತಿದೆ. ಇದರಿಂದ ನಮ್ಮೂರ ನಂದಿನಿಗೆ ಬಿಎಂಆರ್‌ಸಿಎಲ್ ಅವಕಾಶ ಕೊಡದೇ ಇರೋದಕ್ಕೆ ಕನ್ನಡಿಗರು ಕೆಂಡವಾಗಿದ್ದರು.ಇದನ್ನೂ ಓದಿ: ಹೊಸ ಸಿನಿಮಾದ ರಗಡ್ ಲುಕ್ನಲ್ಲಿ ಕಾಣಿಸಿಕೊಂಡ ಅಜಯ್ ರಾವ್

Share This Article