ರಜನಿಕಾಂತ್ ಚಿತ್ರದಲ್ಲಿ ದುನಿಯಾ ವಿಜಯ್ ವಿಲನ್

By
2 Min Read

ಜನಿಕಾಂತ್ ನಟನೆಯ 171ನೇ ಸಿನಿಮಾದಲ್ಲಿ ದುನಿಯಾ ವಿಜಯ್ (Duniya Vijay) ನಟಿಸಲಿದ್ದಾರೆ ಎನ್ನುವ ಸುದ್ದಿ ಹರಡಿದೆ. ಲೋಕೇಶ್ ಕನಕರಾಜ್ (Lokesh Kanakaraj) ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ಸಿನಿಮಾದಲ್ಲಿ ವಿಜಯ್ ವಿಲನ್ ಪಾತ್ರ ಮಾಡಲಿದ್ದಾರಂತೆ. ರಜನಿಕಾಂತ್ ಅಂದರೆ, ವಿಜಯ್ ಗೆ ಪ್ರಾಣ. ಹಾಗಾಗಿ ಈ ಸಿನಿಮಾವನ್ನು ಅವರು ಒಪ್ಪಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಲೋಕೇಶ್ ಮತ್ತು ದುನಿಯಾ ವಿಜಯ್ ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ ಎನ್ನುವುದು ಸದ್ಯದ ವರ್ತಮಾನ.

ಹಾಗಂತ ಈ ಸಿನಿಮಾ ಈಗಲೇ ಶುರುವಾಗುವುದಿಲ್ಲ. ಇನ್ನೂ ರಜನಿಕಾಂತ್ 170ನೇ ಸಿನಿಮಾದಲ್ಲಿ ನಟಿಸಬೇಕಿದೆ. ಈ ಸಿನಿಮಾ ಇನ್ನೂ ಶೂಟಿಂಗ್ ಪ್ರಾರಂಭವಾಗಿಲ್ಲ. ಈ ಸಿನಿಮಾ ಮುಗಿದ ನಂತರವೇ 171ನೇ ಸಿನಿಮಾ ಶುರುವಾಗಲಿದೆ. ಆದರೂ, ನಿರ್ದೇಶಕರು ಪಾತ್ರಗಳನ್ನು ಹುಡುಕುವ ಕಾರ್ಯಕದಲ್ಲಿ ನಿರತರಾಗಿದ್ದಾರಂತೆ.

170ನೇ ಸಿನಿಮಾ ವಿಶೇಷವೇನು?

ಬರೋಬ್ಬರಿ 32 ವರ್ಷಗಳ ಬಳಿಕ ಭಾರತೀಯ ಸಿನಿಮಾ ರಂಗದ ಇಬ್ಬರು ದಿಗ್ಗಜರು ಒಂದಾಗಲಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳಿಂದ ಹರಿದಾಡುತ್ತಿತ್ತು. ಇದು ನಿಜನಾ ಎನ್ನುವ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮೂಡಿತ್ತು. ಕೊನೆಗೂ ಅದು ನಿಜವಾಗಿದೆ ಮೂರು ದಶಕದ ಬಳಿಕ ರಜನಿಕಾಂತ್ ಮತ್ತು ಅಮಿತಾಭ್ ಬಚ್ಚನ್ ಒಟ್ಟಾಗಿ ನಟಿಸುತ್ತಿದ್ದಾರೆ.

ಚಿತ್ರರಂಗದ ದಂತಕಥೆ ಎಂದರೆ ಒಬ್ಬರು ರಜನಿಕಾಂತ್(Rajanikanth), ಮತ್ತೊಬ್ಬರು ಅಮಿತಾಭ್ ಬಚ್ಚನ್. ಈ ಜೋಡಿ ಒಟ್ಟಾಗಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು.ಬಳಿಕ ತಲೈವಾ- ಬಿಗ್ ಬಿ ಜೋಡಿ ತೆರೆಯ ಮೇಲೆ ಕಾಣಿಸಿಕೊಳ್ಳಲೇಯಿಲ್ಲ. ಈ ಸ್ಟಾರ್ ಕಿಲಾಡಿ ಜೋಡಿ, ಇದೀಗ ತಮ್ಮ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಲೈವಾ-ಬಿಗ್ ಬಿ (Bigg B) ಇಬ್ಬರು ಒಟ್ಟಾಗಿ ಕಾಣಿಸಿಕೊಳ್ಳಲು ಕೌಂಟ್‌ಡೌನ್ ಶುರುವಾಗಿದೆ.

ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ(Lyca Productions) ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ. ಇಂಡಿಯನ್, ಖೈದಿ ನಂಬರ್ 150, 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ, ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮತ್ತೆ ಕೈ ಜೋಡಿಸಿದೆ. ರಜನಿಯ 170ನೇ ಚಿತ್ರಕ್ಕೆ ಹಣ ಸುರಿಯುತ್ತಿದೆ. ವಿಶೇಷ ಅಂದರೆ ರಜನಿ ಜೊತೆ ಬಾಲಿವುಡ್ ದಂತಕಥೆ ಅಮಿತಾಭ್ ಬಚ್ಚನ್ (Amitabh Bacchan) ಕೂಡ ನಟಿಸುತ್ತಿದ್ದಾರೆ.

ರಜನಿಕಾಂತ್- ಅಮಿತಾಭ್ ಬಚ್ಚನ್ ಭಾರತೀಯ ಚಿತ್ರರಂಗದ ಘಟಾನುಘಟಿ ನಾಯಕರು. ಈ ಇಬ್ಬರು ತಾರೆಯರು ಅಂದಾ ಕಾನೂನ್, ಗೆರಾಫ್ತಾರ್ ಮತ್ತು ಹಮ್ ಸಿನಿಮಾಗಳಲ್ಲಿ ನಟಿಸಿದ್ದರು. ಈ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿದ್ದವು. ರಜನಿ- ಅಮಿತಾಭ್ ಬಚ್ಚನ್ ಅಭಿನಯಕ್ಕೂ ಮೆಚ್ಚುಗೆಯ ಮಹಾಪೂರ ಹರಿದು ಬಂದಿತ್ತು. ಈ ಸಿನಿಮಾಗಳ ಯಶಸ್ಸಿನ ನಂತರ ಇದೀಗ 32 ವರ್ಷದ ಬಳಿಕ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ಲೈಕಾ ಪ್ರೊಡಕ್ಷನ್ ಹಣ ಹಾಕುತ್ತಿದೆ.ಬಹಳ ಅದ್ಧೂರಿಯಾಗಿ ಮೂಡಿ ಬರಲಿರುವ ಈ ಪ್ರಾಜೆಕ್ಟ್ ಮುಂದಿನ ತಿಂಗಳ ಅಂತ್ಯಕ್ಕೆ ಟೇಕಾಫ್ ಆಗಲಿದೆ.

 

ರಜನಿ-ಅಮಿತಾಭ್ ಬಚ್ಚನ್ ನಟಿಸಲಿರುವ, ಲೈಕಾ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ‘ಜೈ ಭೀಮ್’ ಖ್ಯಾತಿಯ ಟಿಜೆ ಜ್ಞಾನವೇಲ್ (TJ Gnanavel) ನಿರ್ದೇಶಿಸಲಿದ್ದಾರೆ. ಜೈ ಭೀಮ್ ಮೂಲಕ ಇಂಡಿಯನ್ ಸಿನಿಲೋಕದಲ್ಲಿ ಸಂಚಲನ ಸೃಷ್ಟಿಸಿದ್ದ ಜ್ಞಾನವೇಲ್ ರಜನಿ- ಅಮಿತಾಭ್ ಬಚ್ಚನ್ ನಂತಹ ಸೂಪರ್ ಸ್ಟಾರ್ಸ್ ಗೆ ಸಿನಿಮಾ ಆಕ್ಷನ್ ಕಟ್ ಹೇಳುತ್ತಿದ್ದು, ಈ ಪ್ರಾಜೆಕ್ಟ್ ಮೇಲೆ ನಿರೀಕ್ಷೆ ಹೆಚ್ಚಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್