ಡಿವೋರ್ಸ್‌ ಕೋರಿ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ

Public TV
1 Min Read

ಸ್ಯಾಂಡಲ್‌ವುಡ್‌ನಲ್ಲಿ ಒಂದಲ್ಲ ಒಂದು ಶಾಕಿಂಗ್‌ ಸುದ್ದಿಗಳು ಹೊರಬರುತ್ತಿವೆ. ಇದೇ ಹೊತ್ತಿನಲ್ಲಿ ನಟ ದುನಿಯಾ ವಿಜಯ್‌ (Duniya Vijay) ವಿಚ್ಛೇದನಾ ವಿಷಯವಾಗಿ ಸುದ್ದಿಯಲ್ಲಿದ್ದಾರೆ. ವಿಚ್ಛೇದನಾ ಕೋರಿ ದುನಿಯಾ ವಿಜಯ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ತಮ್ಮ ಮೊದಲನೇ ಪತ್ನಿ ನಾಗರತ್ನ ಬಳಿ ವಿಚ್ಛೇದನಾ ಕೋರಿ 2018 ರಲ್ಲಿ ನಟ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸುಮಾರು 6 ವರ್ಷಗಳಿಂದ ವಿಚಾರಣೆ ನಡೆಯುತ್ತಿದ್ದು, ಇಂದು 2ನೇ ಹೆಚ್ಚುವರಿ ಕೌಟುಂಬಿಕ ಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿದೆ. ಇದನ್ನೂ ಓದಿ: ತಮಿಳಿನಲ್ಲಿ ಬಿಗ್‌ ಚಾನ್ಸ್‌ ಗಿಟ್ಟಿಸಿಕೊಂಡ ಕನ್ನಡದ ಆಲಿಯಾ ಭಟ್

ನಾಗರತ್ನ ಜೊತೆ ಬಾಳಲು ಸಾಧ್ಯವಿಲ್ಲ. ನಾಗರತ್ನಗೆ ಜೀವನಾಂಶ ನೀಡಿದ್ದೇನೆ. ಮಕ್ಕಳ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ ಎಂದು ನಟ ದುನಿಯಾ ವಿಜಯ್‌ ವಿಚ್ಛೇದನಾ ಕೋರಿದ್ದರು. ಆದರೆ ನಾಗರತ್ನ, ನನಗೆ ಗಂಡ ಬೇಕು ಎಂದು ಅರ್ಜಿ ಸಲ್ಲಿಸಿದ್ದರು.

ದುನಿಯಾ ವಿಜಯ್ ಪರ ವಕೀಲೆ ರಾಜರಾಜೇಶ್ವರಿ ಮಾತನಾಡಿ, ಅರ್ಜಿ ವಜಾ ಆಗಿದೆ. ವಿಜಯ್ ಅವರನ್ನು ಸಂಪರ್ಕ ಮಾಡಿ ಮುಂದೆ ಏನು ಮಾಡಬೇಕು ಅಂತಾ ಹೇಳುತ್ತೇವೆ. ಅವರು ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೂ ವಿಷಯ ಗಮನಕ್ಕೆ ತಂದಿಲ್ಲ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮಾತಾಡಿ ಹೇಳುತ್ತೇವೆ. ಇದು ಇಲ್ಲಿಗೆ ಮುಗಿದಿಲ್ಲ. ಹೈಕೋರ್ಟ್‌ಗೆ ಹೋಗಬೇಕಾ ಬೇಡ್ವಾ ಎಂಬುದನ್ನು ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ‘ಕೋಟಿ’ ಸಿನಿಮಾ ಪ್ರೀಮಿಯರ್‌ನಲ್ಲಿ ಸೆಲೆಬ್ರಿಟಿಗಳ ದಂಡು

Share This Article