ದುಷ್ಮನ್ ಕಹಾ ಹೈ ಅಂದ್ರೆ, ಕಾಂಗ್ರೆಸ್ ಪಾರ್ಟಿ ತುಂಬಾ ಹೈ: ಹಿತಶತ್ರುಗಳ ಬಗ್ಗೆ ಸಿಎಂಗೆ ಆರ್‌.ಅಶೋಕ್‌ ಎಚ್ಚರಿಕೆ

Public TV
1 Min Read

ಬೆಂಗಳೂರು: ದುಷ್ಮನ್‌ ಕಹಾ ಹೈ ಅಂದ್ರೆ, ಕಾಂಗ್ರೆಸ್‌ ಪಾರ್ಟಿ ತುಂಬಾ ಹೈ ಎನ್ನುವ ಮೂಲಕ ನಿಮ್ಮ ಪಕ್ಷದಲ್ಲೇ ನಿಮಗೆ ಹಿತಶತ್ರುಗಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್‌.ಅಶೋಕ್‌ (R.Ashok) ಎಚ್ಚರಿಸಿದ್ದಾರೆ.

ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಬಗ್ಗೆ ಕೆಲವರಿಂದ ಒಳ ಲೆಕ್ಕಾಚಾರ ಇದೆ ಎಂಬರ್ಥದಲ್ಲಿ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಅಶೋಕ್‌, ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಅಂತಾ ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವ ಬಹುತೇಕ ಕಾಂಗ್ರೆಸ್ ನಾಯಕರು ಅಂತರಂಗದಲ್ಲಿ ಬೇರೆಯದೇ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೊನ್ನಾಳಿಯಲ್ಲಿ ಭಾರೀ ಮಳೆ – ತಾಲೂಕು ಆಸ್ಪತ್ರೆ ಒಳಗೆ ನುಗ್ಗಿದ ನೀರು

ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಬೆನ್ನಿಗೆ ನಿಲ್ಲುತ್ತೇವೆ ಎನ್ನುತ್ತಲೇ ಬೆನ್ನಿಗೆ ಚೂರಿ ಹಾಕುವ ಹಿತಶತ್ರುಗಳು ನಿಮ್ಮ ಪಕ್ಷದಲ್ಲೇ ಬಹಳ ಮಂದಿ ಇದ್ದಾರೆ. ಇಡೀ ರಾಜ್ಯ ತಮ್ಮ ರಾಜೀನಾಮೆಗಾಗಿ ಕಾತುರದಿಂದ ಎದುರು ನೋಡುತ್ತಿದೆ. ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡಬೇಡಿ. ಆದಷ್ಟು ಬೇಗ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

Share This Article