ಗಣಪತಿ ಆತ್ಮಹತ್ಯೆ ಕೇಸ್‌ ನ್ಯಾ.ಕೆ.ಎನ್.ಕೇಶವ ನಾರಾಯಣ ಸಲ್ಲಿಸಿದ್ದ ವರದಿ ರಿಜೆಕ್ಟ್‌- ಕ್ಯಾಬಿನೆಟ್‌ನಲ್ಲಿ ಕೈಗೊಂಡ ತೀರ್ಮಾನಗಳು ಏನು?

Public TV
4 Min Read

– ಕಾಂಗ್ರೆಸ್‌ ಕಟ್ಟಡ ನಿರ್ಮಾಣಕ್ಕೆ ಗುತ್ತಿಗೆ ಅವಧಿ ವಿಸ್ತರಿಸಲು ಒಪ್ಪಿಗೆ

ಬೆಂಗಳೂರು: ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ (DySP Ganapathy Suicide Case) ಪ್ರಕರಣದ ತನಿಖಾ ವರದಿಗಳಲ್ಲಿ ನ್ಯಾ.ಕೆ.ಎನ್.ಕೇಶವ ನಾರಾಯಣ ಸಲ್ಲಿಸಿದ್ದ ವರದಿಯನ್ನು ಕ್ಯಾಬಿನೆಟ್‌ (Cabinet) ತಿರಸ್ಕರಿಸಿದ್ದು ನಿವೃತ್ತ ಐಪಿಎಸ್ ಅಧಿಕಾರಿ ಶ್ರೀವಾಸ್ತವ್ ಸಲ್ಲಿಸಿದ್ದ ವರದಿ ಪೂರ್ಣ ಒಪ್ಪಿಕೊಳ್ಳಲು ಸಚಿವ ಸಂಪುಟ ಸಮ್ಮತಿ ನೀಡಿದೆ.

ಇಂದು ನಡೆದ ಕ್ಯಾಬಿನೆಟ್‌ನಲ್ಲಿ ಕೈಗೊಂಡ ತೀರ್ಮಾನಗಳು
– 110 ಟ್ರಾಫಿಕ್ ಜಂಕ್ಷನ್ ಗೆ ಅಡಾಪ್ಟೀವ್‌ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ 56.45 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಸಂಪುಟ ಒಪ್ಪಿಗೆ

– ತುಮಕೂರು ಜಿಲ್ಲೆ, ಕುಣಿಗಲ್ ತಾಲ್ಲೂಕು, ಕುಣಿಗಲ್ ಗ್ರಾಮದ ಸ.ನಂ. 110ರಲ್ಲಿ 9 ¾ ಗುಂಟೆ “ಸರ್ಕಾರಿಜನ ಬಿ-ಖರಾಬು ಜಮೀನನ್ನು ತಾಲ್ಲೂಕು ಕಾಂಗ್ರೆಸ್ ಸಮಿತಿ, ಕುಣಿಗಲ್ ತಾಲ್ಲೂಕು ಇವರಿಗೆ ಕಾಂಗ್ರೆಸ್ (Congress) ಕಛೇರಿ ಕಟ್ಟಡದ ನಿರ್ಮಾಣಕ್ಕಾಗಿ ಗುತ್ತಿಗೆ ಅವಧಿಯನ್ನು ವಿಸ್ತರಿಸಲು ಒಪ್ಪಿಗೆ. ಇದನ್ನೂ ಓದಿ:  ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್: ಕಂಪ್ಯೂಟರ್ ಫೈಲ್, ಫೋನ್ ಕಾಲ್ ಡಿಲೀಟ್

– ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ರೈಸಿಂಗ್ ಮೇನ್ ಸೇರಿ ರಾಜಕಾಲುವೆಯ ಬಳಿಯ Used Water Treatment Plant ಆವರಣದಲ್ಲಿರುವ ಸಂಸ್ಕರಿಸಿದ ನೀರಿನ ಪಂಪಿಂಗ್ ಸ್ಟೇಷನ್. ದೇವನಹಳ್ಳಿ ಬಳಿಯ ಐಟಿ ಪಾರ್ಕ್ ಕೈಗಾರಿಕಾ ಪ್ರದೇಶದಲ್ಲಿರುವ 40 MLD ಸಾಮರ್ಥ್ಯದ ತೃತೀಯ ಹಂತದ ಸಂಸ್ಕರಣಾ ಘಟಕದ 5 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು 45.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಅನುಮೋದನೆ.

– ಬೆಂಗಳೂರು (Bengaluru) ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ಎಲೆಮಲ್ಲಪ್ಪ ಚೆಟ್ಟಿಯಲ್ಲಿರುವ 15 ದ.ಲ.ಲೀ ಸಾಮರ್ಥ್ಯದ ತ್ಯಾಜ್ಯ ನೀರು ಶುದ್ದೀಕರಣ ಘಟಕವನ್ನು ಮತ್ತು ಸಾದರಮಂಗಲದಲ್ಲಿ 5 ದ.ಲ.ಲೀ ಸಾಮರ್ಥ್ಯದ ISPS (Intermediate Sewage Pumping Station) ಮತ್ತು ಸುಮಾರು 3.5 ಕಿ.ಮೀಗಳ 450mm dia DI (Ductile Iron) ಪೈಪ್ ಲೈನ್ ನ 5 ವರ್ಷಗಳ ಸಮಗ್ರ ಕಾರ್ಯಚರಣೆ ಮತ್ತು ನಿರ್ವಹಣೆ (O&M)ಯನ್ನು ರೂ.19.07 ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಒಪ್ಪಿಗೆ.

– ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 90 ದ.ಲ.ಲೀ ಸಾಮರ್ಥ್ಯದ ಬೆಳ್ಳಂದೂರು ತ್ಯಾಜ್ಯ ನೀರು ಶುದ್ದೀಕರಣ ಘಟಕದ 5 ವರ್ಷಗಳ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆ (O&M)ಯನ್ನು 23.36 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.

– ಬೆಂಗಳೂರು ನೀರು ಸರಬರಾಜು ಮತ್ತು ಮಂಡಳಿ ವತಿಯಿಂದ ಒಳಚರಂಡಿ ಹೊರಮಾವುನಲ್ಲಿರುವ 20 MLD ಬಳಸಿದ ನೀರು ಸಂಸ್ಕರಣಾ ಘಟಕವನ್ನು (UWTP) 05 ವರ್ಷಗಳ ಅವಧಿಗೆ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆ (O&M) ರೂ.15.00 ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ.

– ತಾಯಿ-ಮಕ್ಕಳ ಆರೋಗ್ಯ, ತ್ರಿವಳಿ ತಜ್ಞರು (ಸ್ತ್ರೀರೋಗ ತಜ್ಞರು, ಅರವಳಿಕೆ ತಜ್ಞರು ಮತ್ತು ಮಕ್ಕಳ ತಜ್ಞರು) ಹಾಗೂ ಶುಶ್ರೂಷಕಾಧಿಕಾರಿಗಳ ಹುದ್ದೆಗಳನ್ನು ತರ್ಕಬದ್ಧಗೊಳಿಸಲು ನಿರ್ಧಾರ.

– ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ನಿರ್ವಹಣಾ 2ನೇ ಆವೃತ್ತಿ (UUCMS-V-2.0)ಯನ್ನು 40.29 ಕೋಟಿಗಳಲ್ಲಿ ಅಭಿವೃದ್ಧಿಪಡಿಸಿ ಅನುಷ್ಠಾನಗೊಳಿಸಲು ಅನುಮೋದನೆ.

– ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ  ನೀತಿ, 2025-32″ಕ್ಕೆ ಅನುಮೋದನೆ.

– ಕಲಬುರಗಿ ಜಿಲ್ಲೆಯ ಸೇಡಂ ಪುರಸಭೆಯನ್ನ ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ತೀರ್ಮಾನ.

– ಚನ್ನರಾಯಪಟ್ಟಣ ಯೋಜನಾ ಪ್ರಾಧಿಕಾರವು ಅಮಾನಿಕೆರೆ ಗ್ರಾಮದ ಸ.ನಂ. 152/1, 2, 3, 4, 151/1 153/20 ವಿನ್ಯಾಸದಲ್ಲಿ ಕಾಯ್ದಿರಿಸಿದ 799 ಚ.ಮೀ. ವಿಸ್ತೀರ್ಣದ (ಸಿ.ಎ. ನಿವೇಶನದ) ಪೈಕಿ 210 ಚ.ಮೀ. ನಿವೇಶನವನ್ನು ಕಾಂಗ್ರೆಸ್ ಭವನ ಟ್ರಸ್ಟ್ (ರಿ), ಬೆಂಗಳೂರು ಇವರಿಗೆ ಮಂಜೂರು.

– ಬಾಗಲಕೋಟೆ ಜಿಲ್ಲೆಯ ಲೋಕಾಪುರ  ಪಟ್ಟಣ ಪಂಚಾಯತಿಯ ಸಾರ್ವಜನಿಕ ಉದ್ದೇಶಕ್ಕಾಗಿ ಕಾಯ್ದಿರಿಸಿದ ಆಸ್ತಿ ನಂ.3741, ಕ್ಷೇತ್ರ-400.63 ಚ.ಮೀಟರ್ ನಿವೇಶನವನ್ನು
ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು ಇವರಿಗೆ 30 ವರ್ಷಗಳವರೆಗೆ ಗುತ್ತಿಗೆ ಆಧಾರದ ಮೇಲೆ ನೀಡಲು ಒಪ್ಪಿಗೆ.

– Infrastructure Investment Trusts (InvITs) ಯೋಜನೆಗೆ ಕರ್ನಾಟಕ ವಿದ್ಯುತ್ ಪ್ರಸರಣ ಸ್ವತ್ತುಗಳಿಂದ ಸಂಪನ್ಮೂಲ ಕ್ರೋಢೀಕರಿಸಲು ಅನುಮೋದನೆ ನೀಡುವ ಅಂಶ ಮುಂದೂಡಿಕೆ.

– ಕೊಡಗು ಜಿಲ್ಲೆ, ವಿರಾಜಪೇಟೆಯಲ್ಲಿ ಪ್ರಸ್ತುತ ಇರುವ 60 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಮೊದಲನೇ ಹಂತದಲ್ಲಿ 250 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ರೂ.95.60 ಕೋಟಿಗಳ ಅಂದಾಜು ಮೊತ್ತದಲ್ಲಿ ಮೇಲ್ದರ್ಜೆಗೇರಿಸಲು ಒಪ್ಪಿಗೆ

– ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಿರ್ಮಿಸಲು ಮಂಜೂರಾಗಿರುವ 50 ಹಾಸಿಗೆಗಳ ತೀವ್ರ ನಿಗಾ ಆರೈಕೆ ಘಟಕವನ್ನು (CCB) ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕು ಆಸ್ಪತ್ರೆಗೆ ಸ್ಥಳಾಂತರಿಸಿ, ಅಂದಾಜು ಮೊತ್ತ ರೂ.23.75 ಕೋಟಿಗಳಲ್ಲಿ (ಕಟ್ಟಡ + ವೈದ್ಯಕೀಯ ಉಪಕರಣ) ನಿರ್ಮಿಸಲು ಅನುಮೋದನೆ.

– ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ವಿಸ್ತರಣೆ ಹಾಗೂ ಆಧುನೀಕರಣದ ರೂ.329.00 ಕೋಟಿಗಳ ಪರಿಷ್ಕೃತ ಕ್ರಿಯಾ ಯೋಜನೆಗೆ ಆಡಳಿತಾತ್ಮಕ ತೀರ್ಮಾನ

– ನವದೆಹಲಿಯ ಚಾಣಕ್ಯಪುರಿಯ ಸರ್ದಾರ್ ಪಟೇಲ್ ಮಾರ್ಗದಲ್ಲಿರುವ ಕರ್ನಾಟಕ ಭವನ-2 (ಶರಾವತಿ) ಕಟ್ಟಡದ ನವೀಕರಣ ಮತ್ತು ಅಭಿವೃದ್ಧಿ ಕಾಮಗಾರಿಯನ್ನು 16.30 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.

Share This Article