ವಿಜಯಪುರದಲ್ಲಿ ಮತ್ತೆ ಭೂಕಂಪ: ಜನರಲ್ಲಿ ಆತಂಕ

Public TV
1 Min Read

ವಿಜಯಪುರ: ಉಕ್ಕಲಿ ಗ್ರಾಪಂ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಭೂಕಂಪನ ಸಂಭವಿಸಿದ್ದು, ಜಿಲ್ಲೆಯ ಜನರು ತೀವ್ರ ಆತಂಕಕ್ಕೆ ಒಳಗಾಗಿರುವ ಘಟನೆ ನಡೆದಿದೆ.

ನಿನ್ನೆ ಸಂಜೆ 7.51ಕ್ಕೆ ಭೂಮಿಯ 10 ಕಿ.ಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ. ಇದು ಈ ವಾರದಲ್ಲಿ ಎರಡನೇ ಬಾರಿ ಜಿಲ್ಲೆಯಲ್ಲಿ ಭೂಮಿ ನಲುಗಿದೆ. ಇದರಿಂದಾಗಿ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ರಿಕ್ಟರ್ ಮಾಪಕದಲ್ಲಿ ಭೂಕಂಪನ ದಾಖಲಾಗಿದ್ದು, KSNDMC ಭೂಕಂಪನವನ್ನ ದೃಢಪಡಿಸಿದೆ. ಭೂಮಿ ಪದೇ ಪದೇ ಜಿಲ್ಲೆಯಲ್ಲಿ ಕಂಪಿಸುತ್ತಿರುವುದರಿಂದ ಜಿಲ್ಲೆಯ ಜನರು ಭಯಭೀತರಾಗಿದ್ದಾರೆ. ರಿಕ್ಟರ್ ಮಾಪಕದಲ್ಲಿ ಭೂಕಂಪನ ತೀವ್ರತೆ ದಾಖಲಾಗಿದ್ದು, 2.8 ತೀವ್ರತೆಯಲ್ಲಿ ಭೂಕಂಪನ ಉಂಟಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ. ಇದನ್ನೂ ಓದಿ: ತರಬೇತಿ ನಿರತ ಐಆರ್‌ಬಿ ಪೊಲೀಸ್ ಹೃದಯಾಘಾತದಿಂದ ಸಾವು

Share This Article
Leave a Comment

Leave a Reply

Your email address will not be published. Required fields are marked *