ವಿದೇಶದಲ್ಲಿ ಹೂಡಿಕೆ – ಕೈ ಶಾಸಕ ಸುಬ್ಬಾರೆಡ್ಡಿ ನಿವಾಸದ ಮೇಲೆ ಇಡಿ ದಾಳಿ

Public TV
1 Min Read

ಬೆಂಗಳೂರು: ಚಿಕ್ಕಬಳ್ಳಾಪುರದ ಬಾಗೆಪಲ್ಲಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ (Congress) ಸುಬ್ಬಾರೆಡ್ಡಿ (Subba Reddy) ಅವರ ಬೆಂಗಳೂರು ನಿವಾಸ, ಕಚೇರಿ ಸೇರಿದಂತೆ ಅವರಿಗೆ ಸೇರಿದ ಐದು ಸ್ಥಳಗಳ ಮೇಲೆ‌ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ವಿದೇಶದಲ್ಲಿ ಹಣ ಹೂಡಿಕೆ ಮತ್ತು ವ್ಯವಹಾರದ ಹಿನ್ನೆಲೆಯಲ್ಲಿ ದೆಹಲಿಯ ಇಡಿ ಅಧಿಕಾರಿಗಳ ತಂಡ ಸುಬ್ಬಾರೆಡ್ಡಿ ಅವರ  ಮಾರತ್ ಹಳ್ಳಿಯ ಮನೆ,  ಭಗಿನಿ ಆಸ್ಪತ್ರೆ ಮತ್ತು ಕುಟುಂಬಸ್ಥರ ಮನೆಯ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.  ಇದನ್ನೂ ಓದಿ: ರಾಜಕೀಯ ನಿವೃತ್ತಿ ಬಳಿಕ ಕೃಷಿಯಲ್ಲಿ ತೊಡಗಿಕೊಳ್ತೀನಿ: ಅಮಿತ್ ಶಾ‌

ಮಲೇಷ್ಯಾದಲ್ಲಿ ಆರ್ಥಿಕ ವ್ಯವಹಾರ ಹೊಂದಿರುವ ಸುಬ್ಬಾರೆಡ್ಡಿ, ಕುಟುಂಬದ ಹೆಸರಲ್ಲಿ ಮನೆಗಳನ್ನು ಐಷಾರಾಮಿ ಕಾರುಗಳನ್ನು ಖರೀದಿ ಮಾಡಿದ್ದಾರೆ. ಉದ್ಯಮಿಯೂ ಆಗಿರುವ ಸುಬ್ಬಾರೆಡ್ಡಿ ವಿವಿಧ ದೇಶಗಳಲ್ಲಿ ಆಸ್ತಿ ಮತ್ತು ವಿದೇಶಗಳಲ್ಲಿ ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ.

ಸುಬ್ಬಾರೆಡ್ಡಿ ಮಲೇಷ್ಯಾ, ಹಾಂಕಾಂಗ್​​, ಜರ್ಮನಿಯಲ್ಲಿ ಆಸ್ತಿ ಹೊಂದಿದ್ದಾರೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಸುಬ್ಬಾರೆಡ್ಡಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಭಾರತದಾದ್ಯಂತ 37, ಬೆಂಗಳೂರಿನ 5 ಕಡೆ ಇಡಿ ದಾಳಿ ನಡೆಸಿದೆ.

Share This Article