ಬೆಂಗಳೂರು: ಮಾಲೂರು ಶಾಸಕ ಹಾಗೂ ನಂಜೇಗೌಡ (K.Y Nanjegowda) ಅವರ ಆಸ್ತಿಯನ್ನು ಇ.ಡಿ (E.D) ಮುಟ್ಟುಗೋಲು ಹಾಕಿಕೊಂಡಿದೆ.
ಕೋಮುಲ್ ನಿರ್ದೇಶಕ ನಂಜೇಗೌಡರು ನೇಮಕಾತಿಯಲ್ಲಿ ಹಗರಣದಲ್ಲಿ ಭಾಗಿಯಾಗಿದ್ದಾರೆ. ಸುಮಾರು 75 ಅಭ್ಯರ್ಥಿಗಳಿಂದ ಹಣ ಪಡೆದಿದ್ದಾರೆ. ಮಂಗಳೂರು ಯೂನಿವರ್ಸಿಟಿಯ ಸಿಬ್ಬಂದಿ ಜೊತೆಗೆ ಅವ್ಯಹಾರ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಇದನ್ನೂ ಓದಿ: ಮಾಲೂರು ಶಾಸಕ ನಂಜೇಗೌಡ ಮನೆ ಮೇಲೆ ಇಡಿ ದಾಳಿ
ಪ್ರತಿಯೊಬ್ಬ ಅಭ್ಯರ್ಥಿಗೂ ಕೂಡ ರಾಜಕಾರಣಿಗಳ ಶಿಫಾರಸು ಪತ್ರ ನೀಡಲಾಗಿತ್ತು. ಇ.ಡಿ ದಾಳಿ ವೇಳೆ ಶಿಫಾರಸು ಪತ್ರ ಸಮೇತ ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದರು.
ಅಕ್ರಮ ಹಣ ವರ್ಗಾವಣೆ ಹಿನ್ನೆಲೆಯಲ್ಲಿ 2024ರ ಜನವರಿಯಲ್ಲಿ ನಂಜೇಗೌಡರ ಮನೆ ಮೇಲೆ ಇಡಿ ದಾಳಿ ಮಾಡಿತ್ತು. ಇದನ್ನೂ ಓದಿ: ನನಗೆ ಸಿಎಂ, ಡಿಸಿಎಂ ವಿರುದ್ಧ ಅಸಮಾಧಾನ ಇಲ್ಲ: ಕೆವೈ ನಂಜೇಗೌಡ