ನವದೆಹಲಿ: ಅಕ್ರಮ ಬೆಟ್ಟಿಂಗ್ ಆ್ಯಪ್‌ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಕ್ರಿಕೆಟಿಗ ಶಿಖರ್ ಧವನ್‌ಗೆ (Shikhar Dhawan) ಜಾರಿ ನಿರ್ದೇಶನಾಲಯ (ED) ಸಮನ್ಸ್ ಜಾರಿಗೊಳಿಸಿದೆ.
ಅಧಿಕಾರಿಗಳ ಪ್ರಕಾರ, ಪ್ರಕರಣದ ತನಿಖೆಯು ʻ1xBetʼ ಬೆಟ್ಟಿಂಗ್ ಆ್ಯಪ್‌ಗೆ (Illegal Betting App Case) ಸಂಬಂಧಿಸಿದೆ. ಶಿಖರ್ ಧವನ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳ ಮೂಲಕ ಬೆಟ್ಟಿಂಗ್ ಆ್ಯಪ್ ಪರ ಪ್ರಚಾರ ಮಾಡ್ತಿದ್ದಾರೆ. ಹೀಗಾಗಿ ʻ1xBetʼ ಆ್ಯಪ್ ಜಾಹೀರಾತಿಗೆ ಸಂಬಂಧಿಸಿದಂತೆ 39 ವರ್ಷದ ಧವನ್ ತಮ್ಮ ಪಾತ್ರ ಸ್ಪಷ್ಟಪಡಿಸಬೇಕಿದೆ. ಅದಕ್ಕಾಗಿ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ. ಇದನ್ನೂ ಓದಿ: ದಿಗ್ಗಜರನ್ನ ಹಿಂದಿಕ್ಕಿದ ಸಿಕಂದರ್ ರಜಾ – ಪಾಕ್ ಮೂಲದ ಜಿಂಬಾಬ್ವೆ ಆಟಗಾರ ವಿಶ್ವದ ನಂ.1 ಆಲ್‌ರೌಂಡರ್
ತನಿಖೆಯ ಭಾಗವಾಗಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (PMLA) ಅಡಿಯಲ್ಲಿ ಹೇಳಿಕೆ ದಾಖಲಿಸಲಾಗುವುದು ಎಂದು ಇಡಿ ತಿಳಿಸಿದೆ. ಇದನ್ನೂ ಓದಿ: ಆರ್‌ಸಿಬಿ ಐತಿಹಾಸಿಕ ಗೆಲುವಿನ ಸಂತೋಷದ ಕ್ಷಣ ದುರಂತವಾಯ್ತು – ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಟ್ವೀಟ್
ಏನಿದು ಕೇಸ್?
ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ವಂಚನೆ ಜೊತೆಗೆ ಭಾರೀ ಪ್ರಮಾಣದ ತೆರಿಗೆ ವಂಚನೆ ಮಾಡಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಬೆಟ್ಟಿಂಗ್ ಆ್ಯಪ್‌ಗಳಿಗೆ ಸಂಬಂಧಿಸಿದ ಹಲವಾರು ಪ್ರಕರಣಗಳ ತನಿಖೆ ನಡೆಸುತ್ತಿದೆ. ಈಗಾಗಲೇ ಬೆಟ್ಟಿಂಗ್ ಆ್ಯಪ್‌ಗಳ ಪ್ರಚಾರದಲ್ಲಿದ್ದ ಹಲವಾರು ಬಾಲಿವುಡ್ ಮತ್ತು ದಕ್ಷಿಣ ಭಾರತದ ಚಲನಚಿತ್ರ ತಾರೆಯರು, ಕ್ರಿಕೆಟಿಗರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುತ್ತಿದೆ.
ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ಹರ್ಭಜನ್ ಸಿಂಗ್, ಊರ್ವಶಿ ರೌಟೇಲಾ ಮತ್ತು ಸುರೇಶ್ ರೈನಾ ಕೂಡಾ ಈ ಪಟ್ಟಿಯಲ್ಲಿದ್ದಾರೆ. ಕಳೆದ ತಿಂಗಳು ಸುರೇಶ್ ರೈನಾ ವಿಚಾರಣೆ ಎದುರಿಸಿದ್ದರು. ಇದನ್ನೂ ಓದಿ: ಟಿ20 ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ ಮಿಚೆಲ್ ಸ್ಟಾರ್ಕ್