ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ – ನಮ್ಮ ಮೆಟ್ರೋಗೆ ಜನವೋ ಜನ

Public TV
1 Min Read

ಬೆಂಗಳೂರು: ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರ ಮುಷ್ಕರಕ್ಕೆ (Transport Employees Strike) ಇಳಿದಿದ್ದಾರೆ. ಈ ಎಫೆಕ್ಟ್‌ನಿಂದಾಗಿ ನಮ್ಮ ಮೆಟ್ರೋ (Namma Metro) ನಿಲ್ದಾಣಗಳಲ್ಲಿ ಪ್ರಯಾಣಿಕರು ಸಾಲುಗಟ್ಟಿ ನಿಂತಿದ್ದಾರೆ.

ಬಸ್ ಸರಿಯಾಗಿ ಸಿಗದೆ ಪರದಾಡುತ್ತಿರುವ ಜನರು ಮೆಟ್ರೋದ ಮೊರೆ ಹೋಗಿದ್ದಾರೆ. ಇದೀಗ ಮೆಟ್ರೋ ನಿಲ್ದಾಣಗಳಲ್ಲಿ ಎಂದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಓಡಾಡ್ತಿದ್ದಾರೆ. ದಿನನಿತ್ಯಕ್ಕಿಂತ ಮೆಟ್ರೋ ಪ್ರಯಾಣಿಕರು ಹೆಚ್ಚಾಗಿರುವುದರಿಂದ ತೊಂದರೆಯಾಗದಂತೆ ಮೆಟ್ರೋ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಸರ್ಕಾರಿ ಬಸ್‌ಗಳಿಲ್ಲದೇ ಪ್ರಯಾಣಿಕರ ಪರದಾಟ – ನಿಮ್ಮ ಜಿಲ್ಲೆಯ ಪರಿಸ್ಥಿತಿ ಹೇಗಿದೆ?

ಮೆಟ್ರೋ ನಿಲ್ದಾಣದ ಹೊರಗಿನಿಂದಲೂ ಪ್ರಯಾಣಿಕರು ಕ್ಯೂ ನಿಂತಿದ್ದಾರೆ. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಮುಂಭಾಗದಲ್ಲಿ ಕ್ಯೂ ಗಟ್ಟಲೆ ಪ್ರಯಾಣಿಕರು ಜಮಾಯಿಸಿದ್ದರಿಂದ ಮೆಟ್ರೋ ನಿಲ್ದಾಣದ ಬಳಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಇದನ್ನೂ ಓದಿ: ಸರ್ಕಾರದ ವಿರುದ್ಧ ಸಿಡಿದ ಸಾರಿಗೆ ನೌಕರರು – ಇಂದಿನಿಂದ ಬಸ್‌ ಬಂದ್‌

ಬಸ್‌ಗಳ ಸಂಚಾರ ಕಡಿಮೆ ಆಗಿದ್ದರಿಂದ ಹಲವರು ಸ್ವಂತ ವಾಹನಗಳಲ್ಲೇ ಸಂಚಾರ ಮಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಸಾರಿಗೆ ನೌಕರರು ಸಿಡಿದಿದ್ದರಿಂದ ಸಾರ್ವಜನಿಕರ ಬಸ್ ಸಂಚಾರವಿಲ್ಲದೇ ಪರದಾಡುವಂತಾಗಿದೆ.

Share This Article