Election Results 2026: ಬಂಗಾಳ & ಅಸ್ಸಾಂನಲ್ಲಿ ಬಿಜೆಪಿ, ತಮಿಳುನಾಡಲ್ಲಿ ಡಿಎಂಕೆ ಮುನ್ನಡೆ

0 Min Read

ನವದೆಹಲಿ: ಕುತೂಹಲ ಕೆರಳಿಸಿರುವ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಬಂಗಾಳದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಟಿಎಂಸಿ ಪ್ರಬಲ ಪೈಪೋಟಿ ಒಡ್ಡಿದೆ. ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಮುನ್ನಡೆ ಕಾಯ್ದುಕೊಂಡಿದೆ.

ಪಶ್ಚಿಮ ಬಂಗಾಳದಲ್ಲಿ ಈಗಿನ ಟ್ರೆಂಡ್‌ನಲ್ಲಿ ಬಿಜೆಪಿ 119, ಟಿಎಂಸಿ 109, ಕಾಂಗ್ರೆಸ್‌ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಬಂಗಾಳದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿದ್ದವು. ಆದರೆ, ಟಿಎಂಸಿ ಮತ್ತು ಬಿಜೆಪಿ ನಡುವೆ ಪ್ರಬಲ ಪೈಪೋಟಿ ನಡೆಯುತ್ತಿದೆ.

ತಮಿಳುನಾಡಲ್ಲಿ ಮತ್ತೆ ಆಡಳಿತಾರೂಢ ಡಿಎಂಕೆ ಮುನ್ನಡೆ ಸಾಧಿಸಿದೆ. ಡಿಎಂಕೆ 50, ಎಐಎಡಿಎಂಕೆ 40 ಹಾಗೂ ನಟ ವಿಜಯ್‌ ನೇತೃತ್ವದ ಟಿವಿಕೆ 30ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುಂದಿದೆ.

ಕೇರಳದಲ್ಲಿ ಎಲ್‌ಡಿಎಫ್‌ 56, ಯುಡಿಎಫ್‌ 79, ಎನ್‌ಡಿಎ 2 ಮುನ್ನಡೆ ಸಾಧಿಸಿವೆ. ಅಸ್ಸಾಂನಲ್ಲಿ ಬಿಜೆಪಿ 68, ಕಾಂಗ್ರೆಸ್‌ 22, ಎಯುಡಿಎಫ್‌ 1 ಕ್ಷೇತ್ರದಲ್ಲಿ ಮುಂದಿದೆ.

Share This Article