ದೇಶಕ್ಕೆ ಒಂದೇ ಗ್ಯಾರಂಟಿ ಅದು ಮೋದಿ ಗ್ಯಾರಂಟಿ – #ModiKiGuarantee ಫುಲ್‌ ಟ್ರೆಂಡ್‌

Public TV
1 Min Read

ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಚುನಾವಣೆಯಲ್ಲಿ ಜಯಗಳಿಸುತ್ತಿದ್ದಂತೆ ಬಿಜೆಪಿಯಲ್ಲಿ (BJP) ಸಂಭ್ರಮ ಮುಗಿಲುಮುಟ್ಟಿದ್ದು, ಬಿಜೆಪಿ ನಾಯಕರು ದೇಶಕ್ಕೆ ಮೋದಿಯೇ ಗ್ಯಾರಂಟಿ (ModiKiGuarantee) ಎಂದು ಪೋಸ್ಟರ್‌ ಹಂಚಿಕೊಳ್ಳುತ್ತಿದ್ದಾರೆ.

ಕರ್ನಾಟಕ (Karnataka) ಚುನಾವಣೆಯಲ್ಲಿ ಯಶಸ್ವಿ ಆಗುತ್ತಿದ್ದಂತೆ ಕಾಂಗ್ರೆಸ್‌ (Congress) ಈಗ ನಡೆಯುತ್ತಿರುವ ಚುನಾವಣಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಆರಂಭಿಸಿತ್ತು. ದೇಶಾದ್ಯಂತ ನಮ್ಮ ಗ್ಯಾರಂಟಿ (Congress Guarantee) ಕೆಲಸ ಮಾಡುತ್ತದೆ ಎಂದು ವಿಶ್ವಾಸ ಇಟ್ಟುಕೊಂಡಿದ್ದರು.  ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಬಿಜೆಪಿ ಕೈ ಹಿಡಿದ ಮಹಿಳೆಯರು

 

ಕಾಂಗ್ರೆಸ್‌ ಪ್ರಚಾರಕ್ಕೆ ಪರ್ಯಾಯವಾಗಿ ಬಿಜೆಪಿ ನರೇಂದ್ರ ಮೋದಿ (Narendra Modi) ಅವರನ್ನೇ ಹೆಚ್ಚು ಬಿಂಬಿಸಿತ್ತು. ಅಷ್ಟೇ ಅಲ್ಲದೇ ಮೋದಿ ಗ್ಯಾರಂಟಿಗಳ ಮುಂದೆ ಕಾಂಗ್ರೆಸ್‌ನ ಹುಸಿ ಭರವಸೆಗಳು ಕೆಲಸ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಚುನಾವಣಾ ಪ್ರಚಾರ ಭಾಷಣದಲ್ಲಿ ಹೇಳುತ್ತಿದ್ದರು. ನನ್ನ ಮೂರನೇ ಅವಧಿಯಲ್ಲಿ ವಿಶ್ವದ ಅತೀ ದೊಡ್ಡ ಮೂರು ಆರ್ಥಿಕತೆಯಲ್ಲಿ (Economy) ಭಾರತದ (India) ಹೆಸರು ಇರಲಿದೆ. ಇದು ಮೋದಿ ನೀಡುವ ಗ್ಯಾರಂಟಿ ಎಂದು ಭಾಷಣ ಮಾಡಿದ್ದರು.

ಲೋಕಸಭಾ ಚುನಾವಣೆ ನಡೆಯುವ ಮುನ್ನ ಸೆಮಿಫೈನಲ್‌ ಎಂದೇ ಬಿಂಬಿತವಾಗಿದ್ದ ಹಿಂದಿ ಬೆಲ್ಟ್‌ ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಗಳಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ #ModiKiGuarantee ಟ್ರೆಂಡ್‌ ಆಗಿದೆ. ದೇಶಕ್ಕೆ “ನಮೋ‌” ಗ್ಯಾರಂಟಿ. ಪ್ರಧಾನಿ ಶ್ರೀ ನರೇಂದ್ರ ಮೋದಿ ಇದ್ದರೆ ಇದ್ದರೆ ಎಲ್ಲವೂ ಸಾಧ್ಯ ಎಂದು ಕರ್ನಾಟಕ ಬಿಜೆಪಿ ಪೋಸ್ಟ್‌ ಮಾಡಿದೆ.

Share This Article