Electoral Bonds: ಚುನಾವಣಾ ಆಯೋಗಕ್ಕೆ ಎಲ್ಲಾ ದಾಖಲೆ ಸಲ್ಲಿಸಿದ ಎಸ್‌ಬಿಐ

Public TV
1 Min Read

ನವದೆಹಲಿ: ಸುಪ್ರೀಂ ಕೋರ್ಟ್‌ (Supreme Court) ತರಾಟೆಗೆ ತೆಗೆದುಕೊಂಡ ನಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು (SBI) ಚುನಾವಣಾ ಬಾಂಡ್‌ಗಳ ಎಲ್ಲಾ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. ಇದು ಬಾಂಡ್‌ (Electoral Bonds) ಖರೀದಿಸಿದವರ ಹೆಸರು, ವಿವಿಧ ಬಗೆಯ ಬಾಂಡ್‌ಗಳ ನಿರ್ದಿಷ್ಟ ಸಂಖ್ಯೆ, ಬಾಂಡ್‌ ನಗದೀಕರಿಸಿದ ಪಕ್ಷ, ರಾಜಕೀಯ ಪಕ್ಷಗಳ ಬ್ಯಾಂಕ್‌ ಖಾತೆಗಳ ಕೊನೆಯ ನಾಲ್ಕು ಸಂಖ್ಯೆಯನ್ನು ತೋರಿಸುವ ಮಾಹಿತಿಗಳನ್ನು ಒಳಗೊಂಡಿದೆ.

ಎಸ್‌ಬಿಐ ಈಗ ಎಲ್ಲಾ ವಿವರಗಳನ್ನು ಬಹಿರಂಗಪಡಿಸಿದೆ. ಸಂಪೂರ್ಣ ಖಾತೆ ಸಂಖ್ಯೆಗಳು, ಕೆವೈಸಿ ವಿವರ ಸೇರಿದಂತೆ ಯಾವುದೇ ಮಾಹಿತಿಯನ್ನು ರಹಸ್ಯವಾಗಿ ಇರಿಸಿಲ್ಲ ಎಂದು ಎಸ್‌ಬಿಐ ಅಫಿಡವಿಟ್‌ನಲ್ಲಿ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಕೇಜ್ರಿವಾಲ್‌ ನಿವಾಸದಲ್ಲಿ ಇ.ಡಿ ಶೋಧ – ದೆಹಲಿ ಸಿಎಂ ಬಂಧನ ಸಾಧ್ಯತೆ

ಬ್ಯಾಂಕ್ ನೀಡಿರುವ ವಿವರಗಳನ್ನು ಚುನಾವಣಾ ಆಯೋಗವು ಶೀಘ್ರದಲ್ಲೇ ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುವ ನಿರೀಕ್ಷೆಯಿದೆ. SBI ಈ ಹಿಂದೆ ಚುನಾವಣಾ ಆಯೋಗಕ್ಕೆ ಎರಡು ಪಟ್ಟಿಗಳನ್ನು ನೀಡಿತ್ತು. ಅದನ್ನು ಚುನಾವಣಾ ಸಮಿತಿಯು ಮಾರ್ಚ್ 14 ರಂದು ತನ್ನ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.

ಗುರುವಾರ ಸಂಜೆ 5 ಗಂಟೆಯೊಳಗೆ ಸೀರಿಯಲ್ ನಂಬರ್ ಸೇರಿದಂತೆ ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಬಹಿರಂಗಪಡಿಸಲು ಮತ್ತು ಆ ಕುರಿತು ಅಫಿಡವಿಟ್ ಸಲ್ಲಿಸುವಂತೆ ಸೋಮವಾರ ಸುಪ್ರೀಂ ಕೋರ್ಟ್ ಎಸ್‌ಬಿಐಗೆ ಈ ಹಿಂದೆ ಸೂಚಿಸಿತ್ತು. ಇದನ್ನೂ ಓದಿ: ಕೊಯಮತ್ತೂರಿನಿಂದ ಅಣ್ಣಾಮಲೈ ಸ್ಪರ್ಧೆ – ಬಿಜೆಪಿಯಿಂದ 3ನೇ ಪಟ್ಟಿ ರಿಲೀಸ್‌

Share This Article