ಬೆಂಗಳೂರು: ತಡರಾತ್ರಿ ಸುರಿದ ಭಾರಿ ಬಿರುಗಾಳಿ ಮಳೆ ಹಿನ್ನಲೆಯಲ್ಲಿ ಚಲಿಸುತ್ತಿದ್ದ ಕಾರ್ ಮೇಲೆ ವಿದ್ಯುತ್ ಕಂಬ ಬಿದ್ದಿರುವ ಘಟನೆ ಆನೆಪಾಳ್ಯ ಮುಖ್ಯ ರಸ್ತೆಯ ಎರಡನೇ ಕ್ರಾಸ್ ನಲ್ಲಿ ನಡೆದಿದೆ.
ಮಿಲಿಟರಿ ಕಾಂಪೌಂಡ್ ಒಳಗಿದ್ದ ಬೃಹತ್ ಮರವೊಂದು ಕಾಂಪೌಂಡ್ ಪಕ್ಕದಲ್ಲಿದ್ದ ಟ್ರಾನ್ಸ್ ಫಾರ್ಮರ್ ಮೇಲೆ ಬಿದ್ದ ಪರಿಣಾಮ ಅದೇ ರಸ್ತೆಯ ಸಾಲಿನಲ್ಲಿದ್ದ ನಾಲ್ಕು ವಿದ್ಯುತ್ ಕಂಬಗಳು ಧರೆಗುರುಳಿದಿದ್ದು, ಕಾರುಗಳು ಜಖಂಗೊಂಡಿವೆ. ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರ್ ನಲ್ಲಿ ಡ್ರೈವರ್ ಜೊತೆಗೆ ಮೂವರು ಆಕ್ಸೆಂಚರ್ ಕಂಪೆನಿಯ ನೌಕರರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ಪರಿಣಾಮ ಒಂದು ಇಟಿಯೋಸ್ ಮತ್ತು ಹುಂಡೈ ಗೆಟ್ಜ್ ಕಾರು ಕೂಡ ಜಖಂಗೊಂಡಿದೆ. ಮಾಹಿತಿ ತಿಳಿದ ಕೂಡಲೇ ಅಶೋಕನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಕೆಪಿಟಿಸಿಎಲ್ ನೌಕರರಿಗೆ ಕರೆ ಮಾಡಿ ವಿದ್ಯುತ್ ಕಡಿತಗೊಳಿಸುವಂತೆ ಸೂಚಿಸಿದ್ದಾರೆ. ಅದೃಷ್ಟವಶಾತ್ ಚಲಿಸುತ್ತಿದ್ದ ಕಾರಿನಲ್ಲಿದ್ದ ನಾಲ್ವರು ಸ್ವಲ್ಪದರಲ್ಲೇ ಪಾರಾಗಿದ್ದು ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದಂತಾಗಿದೆ.