ಎಲೆಕ್ಟ್ರಿಕ್ ವಾಹನಗಳ ಕಂಪನಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ನಿತಿನ್ ಗಡ್ಕರಿ

Public TV
3 Min Read

ನವದೆಹಲಿ: ಎಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ ಹೊತ್ತಿಕೊಳ್ಳುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸಚಿವ ನಿತಿನ ಗಡ್ಕರಿ ಅವರು, ಸುರಕ್ಷತಾ ಮಾನದಂಡಗಳನ್ನು ಅಳವಡಿಕೊಳ್ಳುವಲ್ಲಿ ಎಲೆಕ್ಟ್ರಿಕ್ ವಾಹನ ತಯಾರಕರು ನಿರ್ಲಕ್ಷ್ಯ ತೋರಿದರೆ ಅವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿದ ಅವರು, ಕಳೆದ ಎರಡು ತಿಂಗಳಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಸಂಬಂಧಿಸಿದ ಹಲವಾರು ಅವಘಡಗಳು ಬೆಳಕಿಗೆ ಬಂದಿವೆ. ಈ ಘಟನೆಗಳಲ್ಲಿ ಕೆಲವರು ಪ್ರಾಣ ಕಳೆದುಕೊಂಡಿದ್ದು, ಹಲವರು ಗಾಯಗೊಂಡಿರುವುದು ಅತ್ಯಂತ ದುರದೃಷ್ಟಕರ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ರಾಮನವಮಿಯಂದು ಖಾರ್ಗೋನ್‌ನಲ್ಲಿ ಹಿಂಸಾಚಾರ – ಐವರ ಬಂಧನ

ಈ ಘಟನೆಗಳ ಬಗ್ಗೆ ತನಿಖೆ ನಡೆಸಲು ಮತ್ತು ಪರಿಹಾರ ಕ್ರಮಗಳ ಕುರಿತು ಶಿಫಾರಸುಗಳನ್ನು ಮಾಡಲು ನಾವು ತಜ್ಞರ ಸಮಿತಿಯನ್ನು ರಚಿಸಿದ್ದೇವೆ. ವರದಿಗಳ ಆಧಾರದ ಮೇಲೆ, ನಾವು ಎಲೆಕ್ಟ್ರಿಕ್ ವಾಹನಗಳ ಕಂಪನಿಗಳ ಮೇಲೆ ಅಗತ್ಯ ಆದೇಶಗಳನ್ನು ನೀಡುತ್ತೇವೆ ಎಂದು ಹೇಳಿದರು.

ನಾವು ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳಿಗೆ ಗುಣಮಟ್ಟ-ಕೇಂದ್ರಿತ ಮಾರ್ಗಸೂಚಿಗಳನ್ನು ನೀಡುತ್ತೇವೆ. ಯಾವುದೇ ಕಂಪನಿಯು ತನ್ನ ಪ್ರಕ್ರಿಯೆಗಳಲ್ಲಿ ನಿರ್ಲಕ್ಷ್ಯ ತೋರಿದರೆ, ಭಾರೀ ದಂಡವನ್ನು ವಿಧಿಸಲಾಗುವುದು ಮತ್ತು ಎಲ್ಲಾ ದೋಷಯುಕ್ತ ವಾಹನಗಳನ್ನು ಹಿಂಪಡೆಯಲು ಆದೇಶಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇದರ ಮಧ್ಯೆ ಎಲ್ಲಾ ದೋಷಯುಕ್ತ ವಾಹನಗಳನ್ನು ತಕ್ಷಣವೇ ಹಿಂಪಡೆಯಲು ಕಂಪನಿಗಳು ಮುಂಗಡ ಕ್ರಮವನ್ನು ತೆಗೆದುಕೊಳ್ಳಬಹುದು. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ, ಪ್ರತಿಯೊಬ್ಬ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಜೆಸಿಬಿ ಕಾರ್ಖಾನೆ ಓಪನ್‌ – ಬ್ರಿಟನ್‌ ಪ್ರಧಾನಿ ಚಾಲನ

ಕಳೆದ ತಿಂಗಳು ಪುಣೆಯಲ್ಲಿ ರೈಡ್-ಹೇಲಿಂಗ್ ಆಪರೇಟರ್ ಓಲಾ ಅವರ ಎಲೆಕ್ಟ್ರಿಕ್ ಮೊಬಿಲಿಟಿ ಆರ್ಮ್ ಬಿಡುಗಡೆ ಮಾಡಿದ ಇ-ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡ ನಂತರ ಸರ್ಕಾರ ತನಿಖೆಗೆ ಆದೇಶಿಸಿತ್ತು.

ರಸ್ತೆ ಸಾರಿಗೆ ಸಚಿವಾಲಯದ ಪ್ರಕಾರ, ಘಟನೆಗೆ ಕಾರಣವಾದ ಸಂದರ್ಭಗಳನ್ನು ತನಿಖೆ ಮಾಡಲು ಮತ್ತು ಪರಿಹಾರ ಕ್ರಮಗಳನ್ನು ಸೂಚಿಸಲು ಬೆಂಕಿ ಸ್ಫೋಟಕ ಮತ್ತು ಪರಿಸರ ಸುರಕ್ಷತೆ ಕೇಂದ್ರವನ್ನು ಕೇಳಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *