ಚಾ.ನಗರ| ಮೆದಗನಾಣೆ ಗ್ರಾಮಕ್ಕೆ ವಿದ್ಯುತ್ ಸಂಪರ್ಕ

1 Min Read

ಚಾಮರಾಜನಗರ: ಮಲೆ ಮಹದೇಶ್ವರ ಅರಣ್ಯ ವ್ಯಾಪ್ತಿಯ ಮೆದಗನಾಣೆ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.

ಕಾಮಗಾರಿ ಮುಗಿದಿದ್ದರೂ ಸಂಪರ್ಕ ಕಲ್ಪಿಸದ ಹಿನ್ನೆಲೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಜಿಲ್ಲಾಧಿಕಾರಿ ಆದೇಶ ಮೇರೆಗೆ ಸೆಸ್ಕ್ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ. ಇದನ್ನೂ ಓದಿ: ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

ಎರಡು ವರ್ಷಗಳ ಹಿಂದೆ ಜಿಲ್ಲೆಯ 31 ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆಗೆ ಚಾಲನೆ ನೀಡಲಾಗಿತ್ತು. ಬಳಿಕ ಹಂತ ಹಂತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.

ಕಳೆದ ವರ್ಷ ಪಾಲಾರ್ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ನೀಡಲಾಗಿತ್ತು. ಇದೀಗ ಮೆದಗನಾಣೆ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.

Share This Article