ಫಲಿತಾಂಶ ಹೊರಬೀಳುವ ಹೊತ್ತಿನಲ್ಲೇ ರಾಜ್ಯದ ಜನತೆಗೆ ಕರೆಂಟ್‌ ಶಾಕ್ – ವಿದ್ಯುತ್‌ ದರ ಹೆಚ್ಚಳ

Public TV
1 Min Read

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಮತದಾನ ಮುಗಿದಿದ್ದು, ಫಲಿತಾಂಶ ಹೊರಬೀಳುವ ಹೊತ್ತಿನಲ್ಲೇ ರಾಜ್ಯದ ಜನತೆಗೆ ಕರೆಂಟ್‌ ಶಾಕ್‌ ಕೊಟ್ಟಿದೆ. ವಿದ್ಯುತ್‌ ದರ (Electricity Price) ಹೆಚ್ಚಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (Karnataka Electricity Regulatory Commission) ಆದೇಶ ಹೊರಡಿಸಿದೆ.

ಪ್ರತಿ ಯೂನಿಟ್‌ಗೆ ಸರಾಸರಿ 70 ಪೈಸೆ ದರ ಹೆಚ್ಚಳ ಮಾಡಲಾಗಿದೆ. ಏಪ್ರಿಲ್ 1 ರಿಂದ ಅನ್ವಯ ಆಗುವಂತೆ ವಿದ್ಯುತ್‌ ದರ ಏರಿಸಲಾಗಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ವಿಧಾನಸಭೆ ಚುನಾವಣೆ 2023: ಕಣದಲ್ಲಿದ್ದ ಸಿನಿಮಾ ಸೆಲೆಬ್ರಿಟಿಗಳ ಕನಸು ನನಸಾಗತ್ತಾ?

ಆರ್ಥಿಕ ವರ್ಷ 2023-24ನೇ ಸಾಲಿಗೆ ಎಲ್ಲಾ ವಿತರಣಾ ಪರವಾನಿಗೆದಾರರ ವ್ಯಾಪ್ತಿಯ ಗ್ರಾಹಕರಿಗೆ ಅನ್ವಯವಾಗುವಂತೆ ವಿದ್ಯುತ್‌ ದರ ಪರಿಷ್ಕರಿಸಲಾಗಿದೆ ಎಂದು ಆಯೋಗ ತಿಳಿಸಿದೆ.

Share This Article