ಟೆಕ್ಕಿಗಳೇ ಗಮನಿಸಿ, ಎಲೆಕ್ಟ್ರಾನಿಕ್‌ ಸಿಟಿ ಫ್ಲೈ ಓವರ್‌ನಲ್ಲಿ ರಾತ್ರಿ ಸಂಚಾರ ಬಂದ್‌!

Public TV
1 Min Read

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಕಾಮಗಾರಿ ಹಿನ್ನೆಲೆಯಲ್ಲಿ ರಾತ್ರಿ ವೇಳೆ ಬೆಂಗಳೂರಿನ (Bengaluru) ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಲ್ಲಿ (Electronic City Fly Over) ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಈ ಕುರಿತು ಬೆಂಗಳೂರು ನಗರ ಸಂಚಾರಿ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, ಹೊಸೂರು ರಸ್ತೆ ಎಲಿವೇಟೆಡ್‌ ಫ್ಲೈಓವರ್‌ನಲ್ಲಿ ನಿರ್ವಹಣೆ ಕಾಮಗಾರಿ ನಡೆಯಲಿರುವುದರಿಂದ ರಾತ್ರಿಯಿಂದಲೇ ಅನ್ವಯವಾಗುವಂತೆ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ರಾತ್ರಿ ಎಲ್ಲಾ ರೀತಿಯ ವಾಹನಗಳ ಸಂಚಾರ ಬಂದ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಬಸ್, ಮೆಟ್ರೋ ಬಳಿಕ ಹಾಲು ಆಟೋ ದರ ಏರಿಕೆಗೆ ಮುಹೂರ್ತ ಫಿಕ್ಸ್

ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯವರೆಗೆ ಫ್ಲೈ ಓವರ್ ಮೇಲೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಮುಂದಿನ ಆದೇಶದವರೆಗೂ ಈ ನಿರ್ಬಂಧ ಜಾರಿಯಲ್ಲಿ ಇರಲಿದೆ.

 

Share This Article