ಕಾಡಾನೆ ದಾಳಿ – ಮನೆ ಮೇಲೆ ತೆಂಗಿನ ಮರ ಬಿದ್ದು ಲಕ್ಷಾಂತರ ರೂ. ನಷ್ಟ

Public TV
1 Min Read

ಮಡಿಕೇರಿ: ಕೊಡಗು (Kodagu) ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬೆ ಕುಂಜಿಲ ಗ್ರಾಮ ಪಂಚಾಯಿತಿಯ ಯವಕಪಾಡಿ ಗ್ರಾಮದ ಕುಡಿಯರ ಕಾಲೋನಿಯಲ್ಲಿ ಕಳೆದ ರಾತ್ರಿ ಕಾಡಾನೆ (Wiled Elephant) ದಾಂಧಲೆ ನಡೆಸಿದೆ. ಈ ವೇಳೆ ತೆಂಗಿನ ಮರವೊಂದು ಗ್ರಾಮದ ನಿವಾಸಿ ಕುಡಿಯರ ಗಣೇಶ್ ಅವರ ಮನೆಯ ಮೇಲೆ ಬಿದ್ದು ಭಾರೀ ನಷ್ಟ ಸಂಭವಿಸಿದೆ.

ಅಲ್ಲದೇ ಮನೆಯ ಸುತ್ತಮುತ್ತ ಆಡ್ಡಾಡಿ ಕೃಷಿ ಬೆಳೆಯನ್ನು ತಿಂದು ನಷ್ಟ ಉಂಟುಮಾಡಿದೆ. ಕುಟುಂಬದ ಮಂದಿ ಕಾರ್ಯನಿಮಿತ್ತ ಬೇರೆಡೆ ತೆರಳಿದ್ದರಿಂದ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಇದನ್ನೂ ಓದಿ: ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌ – ಒಡಿಶಾ ವಿಧಾನಸೌಧ ಬಳಿ ಭುಗಿಲೆದ್ದ ಆಕ್ರೋಶ

ಈ ಕುರಿತು ಮಡಿಕೇರಿ ತಾಲೂಕು ಬುಡಕಟ್ಟು ಕೃಷಿಕರ ಸಂಘದ (Farmers’ Association) ಅಧ್ಯಕ್ಷ ಕುಡಿಯರ ಮುತ್ತಪ್ಪ ಮಾತನಾಡಿ, ಕಳೆದ ಎರಡು ವರ್ಷಗಳಲ್ಲಿ ಕಾಡಾನೆ ದಾಳಿಯಿಂದಲೇ ಈ ಭಾಗದಲ್ಲಿ ವಾಸಿಸುವ ಸಾಕಷ್ಟು ಮನೆಗಳು ಹಾನಿಗೀಡಾಗಿವೆ. ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿದೆ ಎಂದು ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ಹೆಣ್ಣು ಅಂತ 7 ವರ್ಷದ ಮಗಳನ್ನು ಕಾಲುವೆಗೆ ತಳ್ಳಿ ಕೊಂದ ಪಾಪಿ ತಂದೆ

ಯವಕಪಾಡಿ, ಮರಂದೋಡ, ಕುಂಜಿಲ ಸೇರಿದಂತೆ ವಿವಿಧ ಗ್ರಾಮಗಳಲ್ಲಿನ ತೋಟಗಳು ಹಾನಿಯಾಗಿವೆ. ಇಲ್ಲಿ ಒಂಟಿ ಸಲಗ ಒಂದು ಅಡ್ಡಾಡುತ್ತಿದ್ದು ಪ್ರತಿವರ್ಷ ಸಮಸ್ಯೆ ಆಗುತ್ತಿದೆ. ಒಂಟಿ ಸಲಗವನ್ನ ಹಿಡಿಯಲು ಕೇಂದ್ರ ಸರ್ಕಾರದಿಂದ ಆದೇಶವಾಗಿದ್ದರೂ ಅರಣ್ಯ ಇಲಾಖೆ ಆನೆ ಸೆರೆಹಿಡಿಯಲು ವಿಫಲವಾಗಿದೆ. ಆನೆ ದಾಳಿಯಿಂದ ಹಾನಿಗೊಳಗಾದ ಮನೆಯನ್ನ ಪುನಃ ನಿರ್ಮಿಸಲು ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಅಗತ್ಯವಿದೆ. 10 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ತಪ್ಪಿತು ದೊಡ್ಡ ದುರಂತ – ಮತ್ತೆ ಟೇಕಾಫ್ ಆಗಿ ಇಂಡಿಗೋ ಸೇಫ್ ಲ್ಯಾಂಡಿಂಗ್

Share This Article