ಪುಲ್ವಾಮಾದಲ್ಲಿ ಮತ್ತೆ ಗುಂಡಿನ ಸದ್ದು – ಮೂವರು ಉಗ್ರರನ್ನು ಸುತ್ತುವರಿದ ಸೇನೆ

Public TV
1 Min Read

– ನಾಲ್ವರು ಯೋಧರಿಗೆ ಗಾಯ

ಶ್ರೀನಗರ: ಉಗ್ರರ ಅಟ್ಟಹಾಸಕ್ಕೆ ತುತ್ತಾದ ಪುಲ್ವಾಮಾದಲ್ಲಿ ಉಗ್ರರ ಬೇಟೆ ಮುಂದುವರಿದಿದ್ದು, ಇಂದು ಯೋಧರು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಕಾಳಗ ನಡೆದಿದೆ.

40 ಯೋಧರ ಬಲಿ ಪಡೆದ ಆದಿಲ್ ದಾರ್ ಗೆ ನೆರವು ನೀಡಿದ ಆರೋಪಿಗಳು ಮನೆಯೊಂದರಲ್ಲಿ ಅಡಗಿರುವ ಖಚಿತ ಮೇರೆಗೆ ಸೇನೆ ಕಾರ್ಯಾಚರಣೆ ನಡೆಸಿದೆ. ಕಳೆದ ನಾಲ್ಕು ಗಂಟೆಗಳಿಂದ ಉಗ್ರರು ಮತ್ತು ಸೇನೆ ನಡುವೆ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಇಬ್ಬರಿಂದ ಮೂವರು ಉಗ್ರರನ್ನು ಸೇನೆ ಸುತ್ತವರಿದಿದೆ. ಇದುವರೆಗೂ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದಾರೆ.

40 ಯೋಧರು ಹುತಾತ್ಮ:
ಗುರುವಾರ ಬೆಳಗ್ಗೆ 3.30ಕ್ಕೆ ಜಮ್ಮುವಿನಿಂದ ಶ್ರೀನಗರಕ್ಕೆ 78 ಸಿಆರ್‍ಪಿಎಫ್ ವಾಹನಗಳಲ್ಲಿ 2,547 ಯೋಧರು ಪ್ರಯಾಣಿಸುತ್ತಿದ್ದರು. ಶ್ರೀನಗರಕ್ಕೆ 20 ಕಿ.ಮೀ ದೂರದಲ್ಲಿದ್ದಾಗ 350 ಕೆಜಿ ಸುಧಾರಿತ ಸ್ಫೋಟಕಗಳನ್ನು ತುಂಬಿದ್ದ ಬಿಳಿ ಬಣ್ಣದ ಸ್ಕಾರ್ಪಿಯೋ ಕಾರನ್ನು ಉಗ್ರನೊಬ್ಬ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದನು. ಡಿಕ್ಕಿ ಹೊಡೆದ ರಭಸಕ್ಕೆ ಸ್ಫೋಟಕಗಳು ಸ್ಫೋಟಗೊಂಡ ಪರಿಣಾಮ 40 ಮಂದಿ ಸೈನಿಕರು ವೀರ ಮರಣವನ್ನು ಅಪ್ಪಿದ್ದಾರೆ. ಇದನ್ನೂ ಓದಿ:  ಛಿದ್ರ ಛಿದ್ರವಾದ ಆ ಬಸ್ಸಿನಲ್ಲಿದ್ದ 40 ವೀರ ಯೋಧರ ರೋಚಕ ಕಥೆ ನಿಮಗೆ ತಿಳಿದಿರಲೇಬೇಕು

ಸ್ಫೋಟದ ತೀವ್ರತೆ ಎಷ್ಟು ಇತ್ತು ಎಂದರೆ ಸೈನಿಕರ ದೇಹದ ಭಾಗಗಳು ಹೈವೇಯ 100 ಮೀಟರ್ ದೂರದಲ್ಲಿ ಪತ್ತೆಯಾಗಿತ್ತು. ಸ್ಫೋಟಕಗೊಂಡ ಬಳಿಕ ಉಳಿದ ಬಸ್ಸುಗಳು ನಿಂತ ಮೇಲೆ ಅವುಗಳ ಮೇಲೂ ಉಗ್ರರು ದಾಳಿ ನಡೆಸಿದ್ದರು. ಪೂರ್ವನಿಯೋಜಿತ ಕೃತ್ಯವಾಗಿದ್ದರಿಂದ ಸೈನಿಕರ ವಾಹನವನ್ನು ಉಗ್ರರು ಹಿಂಬಾಲಿಸಿಕೊಂಡು ಬಂದಿದ್ದರು. ಹೀಗಾಗಿ ಸಾವು, ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಉಗ್ರರ ಈ ದಾಳಿಗೆ ಸಾಕ್ಷ್ಯ ಎಂಬಂತೆ ಬಸ್ಸಿನ ಹಿಂಭಾಗದಲ್ಲಿ ಬುಲೆಟ್ ಗುರುತು ಬಿದ್ದಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Share This Article
Leave a Comment

Leave a Reply

Your email address will not be published. Required fields are marked *