ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಇಬ್ಬರು ಉಗ್ರರ ಹತೈಗೈದ ಸೇನೆ

By
1 Min Read

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಬಾರಾಮುಲ್ಲದಲ್ಲಿ (Baramulla) ಭಯೋತ್ಪಾದಕರು (Terrorist) ಮತ್ತು ಭದ್ರತಾ ಪಡೆಗಳ (Security Force) ನಡುವೆ ನಡೆದ ಎನ್‌ಕೌಂಟರ್‌ನಲ್ಲಿ (Encounter) ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದು, ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಉತ್ತರ ಕಾಶ್ಮೀರದ ಸೋಪೋರ್ ಪ್ರದೇಶದ ಚೆಕ್ ಮೊಹಲ್ಲಾ ನೌಪೋರಾದಲ್ಲಿ ಗುರುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಪ್ರಾರಂಭಗೊಂಡು, ಶುಕ್ರವಾರ ಮುಂಜಾನೆಯೂ ಗುಂಡಿನ ದಾಳಿ ಮುಂದುವರೆದಿದೆ. ಇದುವರೆಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 100% ವಿವಿಪ್ಯಾಟ್ ಸ್ಲಿಪ್ ಎಣಿಕೆ ಸಾಧ್ಯವಿಲ್ಲ: ಸುಪ್ರೀಂ ಹೇಳಿದ್ದೇನು?

ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಇಬ್ಬರು ಸೇನಾ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಸಮೀಪದ ನಾಗರಿಕರೊಬ್ಬರು ಗಾಯಗೊಂಡಿದ್ದಾರೆ. ಎನ್‌ಕೌಂಟರ್ ನಡೆದ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ ವಿರುದ್ಧ ಪ್ರತಿಭಟನೆ – ಅಮೆರಿಕದಲ್ಲಿ ಭಾರತ ಮೂಲದ ವಿದ್ಯಾರ್ಥಿನಿ ಬಂಧನ

Share This Article