ಪುಲ್ವಾಮಾದಲ್ಲಿ ಭದ್ರತಾ ಪಡೆಯ ಗುಂಡಿನ ದಾಳಿಗೆ ಉಗ್ರ ಮಟಾಷ್‌

Public TV
1 Min Read

ಜಮ್ಮು ಮತ್ತು ಕಾಶ್ಮೀರ: ಕಾಶ್ಮೀರದ ಪುಲ್ವಾಮಾದಲ್ಲಿ (Pulwama) ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾಕನನ್ನು ಹೊಡೆದುರುಳಿಸಲಾಗಿದೆ.

ಪುಲ್ವಾಮಾ ಜಿಲ್ಲೆಯ ಅರ್ಶಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಭದ್ರತಾ ಪಡೆಗಳಿಗೆ ಸುಳಿವು ಸಿಕ್ಕಿದೆ. ಕೂಡಲೇ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿವೆ. ಈ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

ಭದ್ರತಾ ಪಡೆಗಳ ಪ್ರತಿ ದಾಳಿಗೆ ಓರ್ವ ಉಗ್ರರ ಮೃತಪಟ್ಟಿರುವುದಾಗಿ ಉನ್ನತ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ಭಯೋತ್ಪಾದಕ ಸಿಕ್ಕಿಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಮಕ್ಕಳಿಬ್ಬರ ಕೊಲೆ ಮಾಡಿದ ಪಾಪಿ ತಾಯಿ!

Share This Article