ಮಂಡ್ಯ: ಎಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ (Heart attack) ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೆಆರ್‌ಪೇಟೆ (KR Pete) ತಾಲೂಕಿನ ಕರೋಟಿ ಗ್ರಾಮದಲ್ಲಿ ನಡೆದಿದೆ.
ಕರೋಟಿ ಗ್ರಾಮದ ನವೀನ್ (21) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ನವೀನ್ ಬೆಂಗಳೂರಿನ ಕಾಲೇಜುವೊಂದರಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ರಜೆ ಇದ್ದ ಹಿನ್ನೆಲೆ ಮನೆಗೆ ಬಂದಿದ್ದ. ಇಂದು ಮನೆಯಲ್ಲಿ ಇರುವಾಗ ಹಠಾತ್ ಹೃದಯಾಘಾತವಾಗಿ ನವೀನ್ ಕುಸಿದು ಬಿದ್ದಿದ್ದಾನೆ. ಇದನ್ನೂ ಓದಿ: ಧಾರವಾಡ | ಎಡೆಬಿಡದೆ ಸುರಿದ ಮಳೆಗೆ ಕುಸಿದ ಮನೆ
ತಕ್ಷಣ ಪೋಷಕರು ಕಿಕ್ಕೇರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಕಿಕ್ಕೇರಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಚನ್ನರಾಯಪಟ್ಟಣಕ್ಕೆ ಕರೆದುಕೊಂಡು ಹೋಗಲು ಹೇಳಿದ್ದಾರೆ. ಬಳಿಕ ಚನ್ನರಾಯಪಟ್ಟಣಕ್ಕೆ ಕರೆದುಕೊಂಡು ಹೋಗುವ ಮಾರ್ಗಮಧ್ಯೆ ನವೀನ್ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಎಟಿಎಂ ಕಳ್ಳತನ ಮಾಡುವಾಗಲೇ ಎಎಸ್ಐಯಿಂದ ಕಳ್ಳ ಅರೆಸ್ಟ್ – ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಕಿಕ್ಕೇರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಿದ್ದರೆ ನನ್ನ ಮಗ ಉಳಿಯುತ್ತಿದ್ದ, ಆಸ್ಪತ್ರೆಯ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡದೇ ಇರುವುದು ಮಗನ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.