25 ವರ್ಷ ಬಿಜೆಪಿಯನ್ನು ಸಹಿಸಿದ್ದು ಸಾಕು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ: ಹೆಚ್.ಎಸ್.ಚಂದ್ರಮೌಳಿ

Public TV
1 Min Read

ಮಡಿಕೇರಿ: ಕೊಡಗಿನಲ್ಲಿ ಕಳೆದ 25 ವರ್ಷಗಳಿಂದ ಬಿಜೆಪಿಯನ್ನು (BJP) ಸಹಿಸಿದ್ದು ಸಾಕು. ಈ ಬಾರಿ ಕಾಂಗ್ರೆಸ್ (Congress) ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಕೆಪಿಸಿಸಿ (KPCC) ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಚಂದ್ರಮೌಳಿ (H.S.Chandramouli) ಕರೆ ನೀಡಿದರು.

ಮಡಿಕೇರಿ(Madikeri) ನಗರದ ವಿವಿಧೆಡೆ ಹಲವು ಭರವಸೆಗಳ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ವಿತರಣೆಯ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿನೂತನ ಯೋಜನೆಗಳ ಮೂಲಕ ಬಡವರ ಹಾಗೂ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ಕಾಂಗ್ರೆಸ್ ಮಾಡಲಿದೆ ಎಂದರು. ಇದನ್ನೂ ಓದಿ: ಸಲಿಂಗ ಮದುವೆ ಸಾಂವಿಧಾನಿಕ ಹಕ್ಕಿಗೆ ಸಂಬಂಧಿಸಿದೆ – ಸಾಂವಿಧಾನಿಕ ಪೀಠಕ್ಕೆ ಅರ್ಜಿ

ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ “ಗೃಹಜ್ಯೋತಿ” ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಪೂರೈಕೆ ಮಾಡಲಿದೆ. ಪ್ರತೀ ಮನೆಯೊಡತಿಗೆ 2 ಸಾವಿರ ರೂ. ಪ್ರೋತ್ಸಾಹ ಧನ ನೀಡಲು “ಗೃಹಲಕ್ಷ್ಮಿ” ಯೋಜನೆ ಜಾರಿಯಾಗಲಿದೆ ಮತ್ತು ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್‌ದಾರರಿಗೆ 10 ಕೆಜಿ ಅಕ್ಕಿ ಉಚಿತವಾಗಿ ನೀಡುವ ಯೋಜನೆ ರಾಜ್ಯದಲ್ಲಿ ಜಾರಿಗೆ ಬರಲಿದೆ. ಈ ಯೋಜನೆ ದೇಶದಲ್ಲೇ ಮೊದಲು ಎಂದು ತಿಳಿಸಿದರು. ಇದನ್ನೂ ಓದಿ: ಕಾಮಿಡಿ ಸ್ಟಾರ್ ಧರ್ಮಣ್ಣನಿಗೆ ಕೊನೆಗೂ ಒಲಿದು ಬಂತು `ರಾಜಯೋಗ’ 

ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ 600 ಭರವಸೆಗಳಲ್ಲಿ 589 ಭರವಸೆಗಳನ್ನು ಈಡೇರಿಸಿದೆ. ಈ ಬಾರಿಯೂ ಕಾಂಗ್ರೆಸ್‌ಗೆ ಅವಕಾಶ ನೀಡಿದರೆ ಎಲ್ಲಾ ಭರವಸೆಗಳನ್ನು ಪೂರೈಸಲಾಗುವುದು. ಕೊಡಗಿನ (Kodagu) ಜನ ಕಾಂಗ್ರೆಸ್ ಪರ ಒಲವು ತೋರುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿ ಗೆಲುವು ಖಚಿತವಾಗಿದೆ. ಗ್ಯಾರಂಟಿ ಕಾರ್ಡ್ ಭರವಸೆ ಹೆಚ್ಚು ಫಲ ನೀಡಲಿದೆ. ಕಾಂಗ್ರೆಸ್ ಪಕ್ಷದಲ್ಲಿ ನಾಯಕರು, ಕಾರ್ಯಕರ್ತರು ಎನ್ನುವ ಬೇಧಭಾವವಿಲ್ಲ. ಪ್ರತಿಯೊಬ್ಬರೂ ಕಾರ್ಯಕರ್ತರಂತೆ ದುಡಿಯುತ್ತಿದ್ದಾರೆ. ಬಹುಮತದೊಂದಿಗೆ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದುವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಮೋದಿ ಅಂಡರ್‌ವರ್ಲ್ಡ್ ಡಾನ್‌ಗಳಿಗೆ ತಲೆಬಾಗಿ, ಕೈ ಮುಗಿದಿರೋದು ನಾಚಿಕೆಗೇಡಿನ ಸಂಗತಿ: HDK

Share This Article
Leave a Comment

Leave a Reply

Your email address will not be published. Required fields are marked *