ಈಶ್ವರಪ್ಪಗೆ ಶಾಲು ಹೊದಿಸಿ ಸನ್ಮಾನಿಸಿದ ಬಿಎಸ್‍ವೈ – ಹೆಗಲ ಮೇಲೆ ಕೈ ಹಾಕಿ ಮಾತಾಡಿದ ಕುಚಿಕುಗಳು!

Public TV
1 Min Read

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ (B.S Yediyurappa) ಅವರ ಮೊಮ್ಮಗನ ಮದುವೆ ಆರತಕ್ಷತೆಯಲ್ಲಿ ಈಶ್ವರಪ್ಪ (K.S Eshwarappa) ಭಾಗಿಯಾಗಿದ್ದಾರೆ. ಈ ವೇಳೆ ಬಿಎಸ್‍ವೈ ಆತ್ಮೀಯವಾಗಿ ಅವರನ್ನು ಸ್ವಾಗತಿಸಿದ್ದಾರೆ.

ಶಿವಮೊಗ್ಗದಲ್ಲಿ (Shivamogga) ನಡೆದ ಸಂಸದ ರಾಘವೇಂದ್ರ (B.Y Raghavendra) ಅವರ ಮಗನ ಆರತಕ್ಷತೆ ಕಾರ್ಯಕ್ರಮಕ್ಕೆ ಈಶ್ವರಪ್ಪ ಹಾಗೂ ಅವರ ಪುತ್ರ ಕಾಂತೇಶ್ ಬಂದಿದ್ದರು. ಈ ವೇಳೆ ಈಶ್ವರಪ್ಪ ಅವರ ಹೆಗಲ ಮೇಲೆ ಕೈ ಹಾಕಿ ಆತ್ಮೀಯವಾಗಿ ಯಡಿಯೂರಪ್ಪ ಮಾತಾಡಿಸಿದರು. ಅಲ್ಲದೇ, ಶಾಲು ಹೊದಿಸಿ ಈಶ್ವರಪ್ಪ ಅವರನ್ನು ಸನ್ಮಾನಿಸಿದರು. ಇದನ್ನೂ ಓದಿ: ಇಡಿ ತನಿಖೆಯಿಂದ ವಾಲ್ಮೀಕಿ ನಿಗಮ ಹಗರಣದ ಹಿಂದಿನ ಮಹಾನಾಯಕರ ಮುಖವಾಡ ಕಳಚಲಿದೆ: ಶ್ರೀರಾಮುಲು

ಇದೇ ವೇಳೆ ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ಕಾಂತೇಶ್ ಆಶೀರ್ವಾದ ಪಡೆದರು. ಬಳಿಕ ಹಳೇಯ ರಾಜಕೀಯವನ್ನು ಬದಿಗಿಟ್ಟು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಬೆನ್ನು ತಟ್ಟಿ ಈಶ್ವರಪ್ಪ ಮಾತನಾಡಿಸಿದರು.

ಲೋಕಸಭಾ ಚುನಾವಣೆ ಸಮಯದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಈಶ್ವರಪ್ಪ ಸ್ಪರ್ಧಿಸಿದ್ದರು. ಅಲ್ಲದೇ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದರು. ಈಗ ಎಲ್ಲವನ್ನೂ ಮರೆತು ಮದುವೆ ಮನೆಯಲ್ಲಿ ಆತ್ಮೀಯವಾಗಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಕೇಂದ್ರ ಸಂಪುಟ ಸಭೆ – ಬಳ್ಳಾರಿ-ಚಿಕ್ಕಜಾಜೂರು ದ್ವಿಮುಖ ಮಾರ್ಗ ಯೋಜನೆಗೆ ಅನುಮೋದನೆ

Share This Article