ಕಾನೂನಿನ ಮುಂದೆ ಎಲ್ಲರೂ ಒಂದೇ – ದರ್ಶನ್ ಬೇಲ್ ರದ್ದು ಬಗ್ಗೆ ನಟಿ ರಮ್ಯಾ ಪೋಸ್ಟ್

Public TV
1 Min Read

– ಕಾನೂನು ಕೈಗೆ ತೆಗೆದುಕೊಳ್ಳಬೇಡಿ ಎಂದ ನಟಿ

ರೇಣುಕಾಸ್ವಾಮಿ ಕೇಸ್‌ಲ್ಲಿ ನಟ ದರ್ಶನ್ ಸೇರಿ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಬೆನ್ನಲ್ಲೇ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಸ್ಟೋರಿ ಹಂಚಿಕೊಂಡಿದ್ದಾರೆ.ಇದನ್ನೂ ಓದಿ: ದರ್ಶನ್‌ ಜಾಮೀನು ರದ್ದು | ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶ ಸಾರಿದ ಸುಪ್ರೀಂ: ವಕೀಲ ಚಿದಾನಂದ್

ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿಕೊಂಡಿರುವ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಎಲ್ಲರಿಗೂ ನಾನು ಹೇಳುವುದೇನೆಂದರೆ ನ್ಯಾಯಯುತ ಪ್ರಕ್ರಿಯೆಯನ್ನು ಅನುಸರಿಸಿ, ಕಾನೂನು ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ಎಲ್ಲರಿಗೂ ನ್ಯಾಯ ಸಿಕ್ಕೇ ಸಿಗುತ್ತದೆ ಎಂದು ಬರೆದುಕೊಂಡಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಈ ಜಾಮೀನು ಆದೇಶವನ್ನು ಪ್ರಶ್ನಿಸಿ ರಾಜ್ಯ ಪೊಲೀಸ್ ಇಲಾಖೆ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ವಾದ-ಪ್ರತಿವಾದ ಆಲಿಸಿದ ಸುಪ್ರೀಂ ಗುರುವಾರ (ಆ.14) ಜಾಮೀನು ಅರ್ಜಿಯನ್ನು ರದ್ದುಗೊಳಿಸಿ, ಕೂಡಲೇ ಎಲ್ಲಾ 7 ಆರೋಪಿಗಳು ಸರೆಂಡರ್ ಆಗಬೇಕೆಂದು ಸೂಚನೆ ನೀಡಿತ್ತು.ಇದನ್ನೂ ಓದಿ: ದರ್ಶನ್ ಜಾಮೀನು ರದ್ದು; ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ: ರೇಣುಕಾಸ್ವಾಮಿ ಪತ್ನಿ

Share This Article