ದೊಡ್ಡಬಳ್ಳಾಪುರ ಎಂಜಿನಿಯರ್‌ ಮನೆಯಲ್ಲಿ ಇವಿಎಂ ಯಂತ್ರಗಳು ಪತ್ತೆ

By
1 Min Read

ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಮೋಪರಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ (National Highway) ಅಗಲೀಕರಣ ಕಾಮಗಾರಿ ಸಂಬಂಧ ಹಳೆಯ ಮನೆಯನ್ನು ನೆಲಸಮಗೊಳಿಸುವಾಗ ಇವಿಎಂ ಕಂಟ್ರೋಲ್ ಯೂನಿಟ್‌ಗಳು (EVM Control Unit) ಪತ್ತೆ ಆಗಿವೆ.

ದೊಡ್ಡಬಳ್ಳಾಪುರ ನಿರ್ಮಿತಿ ಕೇಂದ್ರದ ಎಇಇ ಶಿವಕುಮಾರ್ ಎಂಬುವವರ ಮನೆಯಲ್ಲಿ ಈ ಯಂತ್ರಗಳು ಪತ್ತೆ ಆಗಿವೆ ಎಂದು ತಹಶೀಲ್ದಾರ್ ಮೋಹನಕುಮಾರಿ ತಿಳಿಸಿದ್ದಾರೆ. ಇವು 2018ರ ಚುನಾವಣೆಯಲ್ಲಿ ಬಳಸಿ ತಿರಸ್ಕೃತಗೊಂಡ ಇವಿಎಂ ಕಂಟ್ರೋಲ್ ಯೂನಿಟ್‌ಗಳು ಎಂದು ತಹಶೀಲ್ದಾರ್ ಪಬ್ಲಿಕ್ ಟಿವಿಗೆ ಮಾಹಿತಿ‌ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮಹಿ ಗ್ರೌಂಡ್ ಹೊರಗೂ ಲೆಜೆಂಡ್ – ಸಾವಿರ ಕೋಟಿ ದಾಟಿತು ಆಸ್ತಿ ಮೌಲ್ಯ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ಮನೆಯನ್ನು ನೆಲಸಮ ಮಾಡಲಾಗುತ್ತಿತ್ತು. ಈ ವೇಳೆ ಮನೆಯ ಅವಶೇಷಗಳಲ್ಲಿ ಇವಿಎಂ ಕಂಟ್ರೋಲ್ ಯೂನಿಟ್ ಪತ್ತೆ ಆಗಿವೆ. ಯೂನಿಟ್‌ಗಳು ಪತ್ತೆಯಾದ ಹಿನ್ನೆಲೆ ಸ್ಥಳಕ್ಕೆ ತಹಶೀಲ್ದಾರ್ ಮೋಹನ ಕುಮಾರಿ ಭೇಟಿ ನೀಡಿ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಈ ಕುರಿತಂತೆ ಶಿವಕುಮಾರ್ ಅವರಿಗೆ ನೋಟೀಸ್ ನೀಡಲಾಗಿದೆ.

 

ಮುಂದಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಶಿವಶಂಕರ್ ಅವರಿಗೆ ವರದಿಯನ್ನು ನೀಡಿದ್ದಾರೆ. ಸದ್ಯ ರಿಜೆಕ್ಟ್ ಆಗಿರುವ ಇವಿಎಂ ಕಂಟ್ರೋಲ್ ಯೂನಿಟ್‌ಗಳನ್ನು  ಮನೆಯಲ್ಲಿ ಇರಿಸಿಕೊಂಡಿದ್ದು ಯಾಕೆ? ಇದು 2018ರ ಯಂತ್ರಗಳೇ ಎಂಬ ಪ್ರಶ್ನೆ ಕಾಡುತ್ತಿದ್ದು ತನಿಖೆಯ ನಂತರ ಸ್ಪಷ್ಟ ಉತ್ತರ ಸಿಗಲಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್