ಅಕ್ರಮ ಹಣ ವರ್ಗಾವಣೆ ಕೇಸ್‌ – ಮಾಜಿ ಸಿಎಂ ಭೂಪೇಶ್‌ ಬಘೇಲ್‌ ಪುತ್ರ ಬಂಧನ

Public TV
1 Min Read

ರಾಯ್ಪುರ: ಮದ್ಯ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ (Bhupesh Baghel) ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಮತ್ತು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ (Chaitanya Baghel) ಅವರ ಪುತ್ರನನ್ನು ಇ.ಡಿ ಬಂಧಿಸಿದೆ.

ಶುಕ್ರವಾರ ಬೆಳಗ್ಗೆ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈ ವರ್ಷ ಎರಡನೇ ಬಾರಿಗೆ ಭಿಲಾಯಿಯಲ್ಲಿರುವ ಬಘೇಲ್ ಕುಟುಂಬದ ನಿವಾಸದ ಮೇಲೆ ದಾಳಿ ನಡೆಸಿದರು. ಬಳಿಕ ಬಘೇಲ್ ಪುತ್ರ ಚೈತನ್ಯ ಬಘೇಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಇದನ್ನೂ ಓದಿ: ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ| ಸಂಸತ್‌ನಲ್ಲಿ ಮಹಾಭಿಯೋಗಕ್ಕೆ ತಯಾರಿ – ಸುಪ್ರೀಂ ಮೆಟ್ಟಿಲೇರಿದ ನ್ಯಾ.ಯಶವಂತ್ ವರ್ಮಾ

ರಾಜ್ಯದ ರಾಯ್‌ಗಢ ಜಿಲ್ಲೆಯ ತಮ್ನಾರ್ ತಹಸಿಲ್‌ನಲ್ಲಿ ಅದಾನಿ ಗ್ರೂಪ್‌ನಿಂದ ಕಲ್ಲಿದ್ದಲು ಗಣಿ ಯೋಜನೆಗಾಗಿ ಮರಗಳನ್ನು ಕಡಿಯುತ್ತಿರುವ ವಿಷಯವನ್ನು ಡೈವರ್ಟ್‌ ಮಾಡಲು ಹೀಗೆ ಮಾಡಲಾಗಿದೆ ಎಂದು ಭೂಪೇಶ್ ಬಘೇಲ್ ಟೀಕಿಸಿದ್ದಾರೆ.

ಚೈತನ್ಯ ಬಂಧನದ ಹಿನ್ನೆಲೆಯಲ್ಲಿ ಬಘೇಲ್ ಸೇರಿದಂತೆ ಎಲ್ಲಾ ಕಾಂಗ್ರೆಸ್ ಶಾಸಕರು ಇಂದು ಬೆಳಗ್ಗೆ ವಿಧಾನಸಭಾ ಕಲಾಪಗಳನ್ನು ಬಹಿಷ್ಕರಿಸಿದರು. ‘ಬಘೇಲ್ ಮತ್ತು ನಮ್ಮ ಮೇಲೆ ಕಿರುಕುಳ ನೀಡಲು ಇಡಿ ಮುಂದಾಗಿದೆ. ಅದರ ಬಗ್ಗೆ ಮಾತನಾಡುವುದು ಮುಖ್ಯ. ಚೈತನ್ಯರ ಬಂಧನವನ್ನು ನಾವು ವಿರೋಧಿಸುತ್ತೇವೆ. ನಾವು ಕಲಾಪವನ್ನು ಬಹಿಷ್ಕರಿಸುತ್ತೇವೆ’ ಎಂದು ವಿರೋಧ ಪಕ್ಷದ ನಾಯಕ ಚರಣ್ ದಾಸ್ ಮಹಂತ್ ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿಯ 50, ಬೆಂಗ್ಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ

ಕಾಂಗ್ರೆಸ್ ನಾಯಕ ಬಘೇಲ್ ಅವರ ಪುತ್ರ ಚೈತನ್ಯ ಬಘೇಲ್ ವಿರುದ್ಧದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದ ಮದ್ಯ ಹಗರಣದ ಭಾಗವಾಗಿ ಜಾರಿ ನಿರ್ದೇಶನಾಲಯ (ED) ಶುಕ್ರವಾರ ಅವರ ನಿವಾಸದಲ್ಲಿ ಮತ್ತೆ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Share This Article